
ಬಳ್ಳಾರಿ, 03 ಜನವರಿ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಬ್ಯಾನರ್ ಗಲಾಟೆಯಲ್ಲಿ ಗುಂಡು ತಗುಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ (26) ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶನಿವಾರ ಭೇಟಿ ನೀಡಿ, ವೈಯಕ್ತಿಕವಾಗಿ 25 ಲಕ್ಷ ರೂಪಾಯಿ ಪರಿಹಾರ ನೀಡಿ ಸಾಂತ್ವನ ಹೇಳಿದ್ದಾರೆ.
ಶಾಸಕರಾದ ನಾರಾ ಭರತರೆಡ್ಡಿ ಮತ್ತು ಜೆ.ಎನ್. ಗಣೇಶ್ ಮತ್ತು ಮುಖಂಡರು - ಕಾರ್ಯಕರ್ತರ ಸಮ್ಮುಖದಲ್ಲಿ ಸಂತ್ರಸ್ತ ತಾಯಿಗೆ 25 ಲಕ್ಷ ರೂಪಾಯಿ ನಗದು ಹಣವನ್ನು ಕೊಟ್ಟು, `ನಾನು, ನಮ್ಮ ಸರ್ಕಾರ, ಶಾಸಕ ನಾರಾ ಭರತರೆಡ್ಡಿ, ಶಾಸಕ ಜೆ.ಎನ್. ಗಣೇಶ್ ಮತ್ತು ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ. ಆತಂಕ ಪಡಬೇಡಿ. ನಿಮಗೆ ಮನೆ ಕಟ್ಟಿಸಿಕೊಡಲಾಗುತ್ತದೆ ಎಂದು ಧೈರ್ಯ ತುಂಬಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್