ಭಾಗ್ಯನಗರ ಪಪಂ ಅಧ್ಯಕ್ಷ ರಮೇಶ ಹ್ಯಾಟಿ ಪದಗ್ರಹಣ
ಕೊಪ್ಪಳ, 03 ಜನವರಿ (ಹಿ.ಸ.) : ಆ್ಯಂಕರ್ : ಭಾಗ್ಯನಗರ ಪಟ್ಟಣ ಪಂಚಾಯತಿಯ ಮೊದಲಾರ್ಧದ ಎರಡನೇ ಅವಧಿಗೆ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ರಮೇಶ ಲಕ್ಷ್ಮಪ್ಪ ಹ್ಯಾಟಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಸನ್ಮಾನ ಮಾಡಿ, ಕೊಪ್ಪಳದ ಶ್ರೀ ಗವಿಮ
ಭಾಗ್ಯನಗರ ಪಪಂ ಅಧ್ಯಕ್ಷ ರಮೇಶ ಹ್ಯಾಟಿ ಪದಗ್ರಹಣ


ಕೊಪ್ಪಳ, 03 ಜನವರಿ (ಹಿ.ಸ.) :

ಆ್ಯಂಕರ್ : ಭಾಗ್ಯನಗರ ಪಟ್ಟಣ ಪಂಚಾಯತಿಯ ಮೊದಲಾರ್ಧದ ಎರಡನೇ ಅವಧಿಗೆ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ರಮೇಶ ಲಕ್ಷ್ಮಪ್ಪ ಹ್ಯಾಟಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಸನ್ಮಾನ ಮಾಡಿ, ಕೊಪ್ಪಳದ ಶ್ರೀ ಗವಿಮಠದ ಜಾತ್ರೆಯೂ ಸೇರಿದಂತೆ ವಿವಿಧ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವ ಮೂಲಕ ಜನರಿಗೆ ಹತ್ತಿರವಾಗಿ ಕೆಲಸ ಮಾಡುವಂತೆ ಮತ್ತು ಜಾತ್ರೆಯ ನಂತರ ಭಾಗ್ಯನಗರದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು. ಜನರಿಗೆ ಮೂಲಭೂತ ಸಮಸ್ಯೆಗಳಾದ ಚರಂಡಿ ಸ್ವಚ್ಛತೆ, ಬೀದಿ ದೀಪ, ಸಾರ್ವಜನಿಕ ಶೌಚಾಲಯ, ರಸ್ತೆ ಸ್ವಚ್ಛತೆ, ಬೀದಿ ನಾಯಿ ಹಾಗೂ ಧನಕರುಗಳ ಸಮಸ್ಯೆ ಹಾಗೂ ಫಾರಂ 3 ಸಮಸ್ಯೆಗಳಿಗೆ ಮುಕ್ತಿ ಕೊಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಪ.ಪಂ. ಉಪಾಧ್ಯಕ್ಷ ಹೊನ್ನೂರಸಾಬ ಭೈರಾಪೂರ, ಸದಸ್ಯೆ ಸವಿತಾ ಗೋರಂಟ್ಲಿ, ನಗರಾಭಿವೃದ್ಧಿ ಪ್ರಾಧಿಕರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ನಿಕಟಪೂರ್ವ ಅಧ್ಯಕ್ಷ ತುಕಾರಾಮಪ್ಪ ಗಡಾದ, ಮುಖ್ಯಾಧಿಕಾರಿ ಸುರೇಶ ಬಬಲಾದ ಅನೇಕರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande