
ಬೆಂಗಳೂರು, 03 ಜನವರಿ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಸೆಸ್ ಮೇಲ್ವಿಚಾರಣಾ ವ್ಯವಸ್ಥೆಯ ಪರಿಷ್ಕರಣೆ ಕುರಿತು ವಿಕಾಸ ಸೌಧದಲ್ಲಿ ಸಭೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಿಸಿನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಇ- ಗವರ್ನೆನ್ಸ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಆಮ್ಲಾನ್ ಬಿಸ್ವಾಸ್, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ ಡಿ, ಉಪ ಕಾರ್ಯದರ್ಶಿ ಮತ್ತು ಜಂಟಿ ಕಾರ್ಮಿಕ ಆಯುಕ್ತರಾದ ಉಮೇಶ್, ಜಂಟಿ ಕಾರ್ಮಿಕ ಆಯುಕ್ತರಾದ ಡಾ. ರವಿಕುಮಾರ್, ಈ ಆಡಳಿತ ಇಲಾಖೆಯ ಅಧಿಕಾರಿಗಳು, ಕಾರ್ಮಿಕ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa