ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು ಡಿಸಿ ಸೂಚನೆ
ವಿಜಯಪುರ, 03 ಜನವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯ್ಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ
ಡಿಸಿ


ವಿಜಯಪುರ, 03 ಜನವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯ್ಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಜರುಗಿದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈಯಲು ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಿಸಲಾದ ಜಿಲ್ಲಾ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಿ ಕ್ರೀಡಾಪಟುಗಳಿಗೆ ಅಣಿಗೊಳಿಸಲಾಗಿದ್ದು, ಅದರಂತೆ ಕ್ರೀಡಾ ಪರಿಕರಗಳು, ಕ್ರೀಡಾಂಗಣವನ್ನು ಸ್ವಚ್ಛವಾಗಿಸಿಟ್ಟುಕೊಂಡು ಕ್ರೀಡಾಪಟುಗಳಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಒಳಚರಂಡಿ ನೀರು ಹರಿದು ಹೋಗಿ ತೊಂದರೆಯಾಗದಂತೆ ನೋಡಿಕೊಂಡು ಕೂಡಲೇ ಮಹಾನಗರ ಪಾಲಿಕೆ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡು ಡ್ರೈನೇಜ್ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅವಶ್ಯಕವಿರುವ ಕಾಮಗಾರಿಗಳನ್ನು ಕೈಗೊಂಡು ಸುಸಜ್ಜಿತವಾಗಿಟ್ಟುಕೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದ ಉತ್ತರ ದಿಕ್ಕಿನಲ್ಲಿರುವ ಸುಲಭ ಶೌಚಾಲಯವನ್ನು ಪೇ & ಯುಸ್ ಆಧಾರದ ಮೇಲೆ ನಿರ್ವಹಣೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಕೊಪ್ಪಳದ ಪವರ್ ಗ್ರಿಡ್ ಕಾರ್ಪೋರೇಶನ್ ಆಪ್ ಇಂಡಿಯಾ ಲಿ, ವತಿಯಿಂದ 19.44 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೌರ ವಿದ್ಯುತ್ ಬೆಳಕಿನ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಈ ಕಾಮಗಾರಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಖೋಖೋ, ಕಬಡ್ಡಿ, ಬಾಸ್ಕೆಟ್‍ಬಾಲ್ ಕ್ರೀಡೆಗಾಗಿ ವಿಡಿಎ ಜಾಗದಲ್ಲಿ ಸ್ಥಳಾವಕಾಶ ಇರುವುದರಿಂದ ಆ ಜಾಗ ಬಳಸಿಕೊಳ್ಳಲು ಈಗಾಗಲೇ ಪತ್ರ ವ್ಯವಹಾರ ಮಾಡಿಕೊಂಡಿದ್ದು, ಅಂದಾಜು ಪತ್ರಿಕೆ ಸಿದ್ಧಪಡಿಸಿ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಸಾವಳಸಂಗ ಗ್ರಾಮದ ಅರಣ್ಯ ಪ್ರದೇಶದಲ್ಲಿ 4ರಿಮದ 6 ಕಿ.ಮೀ. ವಿಸ್ತ್ರೀರ್ಣವಿರುವ ಎಂಟಿಬಿ ಟ್ರ್ಯಾಕ್ ನಿರ್ಮಿಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈ ಭಾಗದಲ್ಲಿ ಎಂಟಿಬಿ ಟ್ರ್ಯಾಕ್ ನಿರ್ಮಿಸುವುದರಿಂದ ಜಿಲ್ಲೆಯ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಹಾಗಾಗಿ ಈ ಸ್ಥಳದಲ್ಲಿ ಟ್ರ್ಯಾಕ್ ನಿರ್ಮಿಸುವ ಕುರಿತು ಸ್ಥಳ ಪರಿಶೀಲನೆ ನಡೆಸಿ, ಸಾಧ್ಯಸಾಧ್ಯತೆ ಕುರಿತು ಸಮಗ್ರವಾಗಿ ಪರಿಶೀಲಿಸಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಯ್ಯ ಸಾಲಿಮಠ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande