
ಕೊಪ್ಪಳ, 03 ಜನವರಿ (ಹಿ.ಸ.) :
ಆ್ಯಂಕರ್ : ಜನರು ಎಚ್ಚರಿಕೆಯಿಂದ ವಾಹನ ಚಲಾಯಿಸುವುದರ ಜೊತೆಗೆ ಸರಕಾರದ ನಿಯಮಗಳನ್ನು ಪಾಲನೆ ಮಾಡಬೇಕು. ನಿರ್ಲಕ್ಷ್ಯವಹಿಸಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಸಂಭವಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು.
ಕೊಪ್ಪಳ ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೆÇಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ ಕಛೇರಿ ಕೊಪ್ಪಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷಿತಾ ಮಾಸಾಚರಣೆ- 2026ರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕಾನೂನು ಉಲ್ಲಂಘನೆಯಿಂದಲೇ ಬಹಳಷ್ಟು ರಸ್ತೆ ಅಪಘಾತಗಳು ಸಂಭವಿಸುತ್ತವೆ. ಮನೆಯಲ್ಲಿ ಒಬ್ಬರು ಅಥವಾ ಇಬ್ಬರು ದುಡಿಯುವವರು ಇರುತ್ತಾರೆ ಅವರಿಗೆ ಅಪಘಾತಗಳಾದಲ್ಲಿ ಅವರ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ. ಕಾನೂನುಗಳು ಇರುವುದು ನಮ್ಮ ಸುರಕ್ಷತೆಗೆ ಹಾಗಾಗಿ ನಾವೆಲ್ಲರೂ ಅವುಗಳನ್ನು ಪಾಲನೆ ಮಾಡಬೇಕು. 18 ವರ್ಷದೊಳಗಿನ ಮಕ್ಕಳಿಗೆ ದ್ವೀ ಚಕ್ರ ಸೇರಿದಂತೆ ಇತರೆ ಯಾವುದೇ ವಾಹನಗಳ ಚಲಾವಣೆಗೆ ಕೊಡಬಾರದು. ಕೆಲವು ಪೆÇೀಷಕರು ತಮ್ಮ ಮಕ್ಕಳಿಗೆ ವಾಹನಗಳನ್ನು ಚಲಾಯಿಸಲು ಕೊಟ್ಟು ನಮ್ಮ ಮಗ ಅಥವಾ ಮಗಳು ಚಿಕ್ಕ ವಯಸ್ಸಿನಲ್ಲಿ ವಾಹನ ಚಲಾಯಿಸುತ್ತಾರೆ ಎಂದು ಖುಷಿ ಪಡುತ್ತಾರೆ, ಅದು ಸರಿಯಲ್ಲ ಎಂದು ಹೇಳಿದರು.
ವಾಹನಗಳ ಮಾಲೀಕರು ತಮ್ಮ ವಾಹನಗಳ ಮಾರಾಟ ಮಾಡಿದ ತಕ್ಷಣ ಅದನ್ನು ವಾಹನ ಖರೀದಿಸಿದವರ ಹೆಸರಿಗೆ ವರ್ಗಾಯಿಸಬೇಕು. ಇಲ್ಲದಿದ್ದರೆ ಏನಾದರೂ ಅಪಘಾತವಾದರೆ ವಾಹನ ತಮ್ಮ ಹೆಸರಲ್ಲಿ ಇರುವುದರಿಂದ ತಮ್ಮನ್ನೆ ಹೊಣೆಗಾರರನ್ನಾಗಿ ಮಾಡುತ್ತಾರೆ. ರಸ್ತೆ ನಿಯಮಗಳನ್ನು ಎಲ್ಲರೂ ಪಾಲನೆ ಮಾಡುವುದರ ಜೊತೆಗೆ ಸೀಟ್ ಬೆಲ್ಟಗಳನ್ನು ಉಪಯೋಗಿಸಿಕೊಂಡು ವಾಹನ ಚಲಾಯಿಸಬೇಕೆಂದು ಹೇಳಿದರು.
ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಆರ್. ಹೇಮಂತಕುಮಾರ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಅಪಘಾತಗಳಿಂದಲೇ ಸಾಯುವವರ ಸಂಖ್ಯೆ ಹೆಚ್ಚಿದೆ. ಪ್ರತಿ ದಿನ 480 ರಿಂದ 500 ಜನರು ನಮ್ಮ ದೇಶದಲ್ಲಿ ಅಪಘಾತಗಳಿಂದ ಮೃತ ಪಡುತ್ತಾರೆ. ಜನರಲ್ಲಿ ಅರಿವಿದೆ ಆದರೆ ರಸ್ತೆ ನಿಯಮಗಳನ್ನು ಪಾಲಿಸುವುದಿಲ್ಲ. ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿದೆ. ಹಾಗಾಗಿ ನಾವು ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ವಾಹನ ಚಲಾಯಿಸಬೇಕೆಂದು ಹೇಳಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ನಮ್ಮ ಇಲಾಖೆಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮಾಡುತ್ತಿದ್ದೆವೆ. ಇದರ ಉದ್ದೇಶ ಜನರಿಗೆ ರಸ್ತೆ ನಿಯಮಗಳ ಪಾಲನೆ ಜೊತೆಗೆ ಸುರಕ್ಷಿತ ವಾಹನಗಳ ಚಲಾವಣೆಯಾಗಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾದಂತೆ ಕಾರ, ಬೈಕ್, ಬಸ್ಸಿನ ತಾಂತ್ರಿಕತೆಗಳು ಬದಲಾಗುತ್ತಿವೆ. ಜನರು ಕಾನೂನು ಪಾಲಿಸಿದರೆ ಅಪಘಾತಗಳಾಗುವುದಿಲ್ಲ. ಎಲ್ಲರೂ ತಮ್ಮ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು ವಾಹನ ಚಲಾಯಿಸಬೇಕು. ಇತ್ತಿಚೆಗೆ ಚಿತ್ರದುರ್ಗ ಮತ್ತು ಚಿತ್ತೂರನಲ್ಲಿ ಬಸ್ಸುಗಳ ಘನಘೋರ ಅಪಘಾತಗಳಾಗಿರುವುದನ್ನು ಕಾಣುತ್ತೆವೆ. ರಸ್ತೆ ಸುರಕ್ಷತಾ ನಿಯಮಗಳು ನಿಮಗಾಗಿ ನಿಮ್ಮವರಿಗಾಗಿ ಪಾಲನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಜಗದೀಶ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೆಶಕ ಜಿ. ಸುರೇಶ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ಒಳಗೊಂಡ ಕರ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ಹಿರಿಯ ಮೋಟಾರ ವಾಹನ ನಿರೀಕ್ಷಕರಾದ ವಿಜಯಕುಮಾರ್ ಹಾಗೂ ಮೃತ್ಯುಂಜಯ ವನಕೇರಿ, ಮೋಟಾರ ವಾಹನ ನಿರೀಕ್ಷಕರಾದ ಮಂಜುನಾಥ ಮತ್ತು ವಿಜಯೇಂದ್ರ ಸೇರಿದಂತೆ ಸಾರಿಗೆ ಇಲಾಖೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸುರೇಶ ಕುಂಭಾರ ಸ್ವಾಗತಿಸಿದರು. ಆನಂದ ಹಳ್ಳಿಗುಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್