ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಅಶೋಕ
ಬೆಂಗಳೂರು, 03 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಇದು ಭ್ರಷ್ಟ ಸರ್ಕಾರವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಳ್ಳಾರಿ ಘಟನೆಗೆ ಸಂಬಂಧಿಸಿ ಆಗಷ್ಟೇ ಅಧಿಕಾರ ವಹಿಸಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಅಶೋಕ


ಬೆಂಗಳೂರು, 03 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಇದು ಭ್ರಷ್ಟ ಸರ್ಕಾರವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಳ್ಳಾರಿ ಘಟನೆಗೆ ಸಂಬಂಧಿಸಿ ಆಗಷ್ಟೇ ಅಧಿಕಾರ ವಹಿಸಿಕೊಂಡಿರುವ ಎಸ್‌ಪಿ ಅವರನ್ನು ಅಮಾನತು ಮಾಡಿರುವ ಕ್ರಮ ಖಂಡನೀಯ ಎಂದರು.

ತಮ್ಮ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಕಾಂಗ್ರೆಸ್‌ ಸರ್ಕಾರ ಅಧಿಕಾರಿಗಳನ್ನು ಬಲಿಕೊಡುತ್ತಿದೆ. ಕಾನೂನು ಸುವ್ಯವಸ್ಥೆ ವಿಫಲವಾದ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಇಂತಹ ಅಮಾನತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande