ಬಳ್ಳಾರಿ ಬ್ಯಾನರ್ ಗಲಭೆಯನ್ನು ಮುಖ್ಯಮಂತ್ರಿಗೆ ವಿವರಿಸಿದ ಶಾಸಕ ಭರತರೆಡ್ಡಿ
ತೋರಣಗಲ್ಲು, 03 ಜನವರಿ (ಹಿ.ಸ.) : ಆ್ಯಂಕರ್ : ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳ್ಳಾರಿ ಘಟನೆಗೆ ಸಂಬಂಧಿಸ
ಬಳ್ಳಾರಿ ಬ್ಯಾನರ್ ಗಲಭೆಯನ್ನು ಸಿಎಂಗೆ ವಿವರಿಸಿದ ಶಾಸಕ ಭರತರೆಡ್ಡಿ


ತೋರಣಗಲ್ಲು, 03 ಜನವರಿ (ಹಿ.ಸ.) :

ಆ್ಯಂಕರ್ : ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಯವರು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಡಿಜಿಪಿ ಹಿತೇಂದ್ರ,

ಬಳ್ಳಾರಿ ವಲಯದ ಐಜಿ ವರ್ತಿಕಾ ಕಟಿಯಾರ್ ಹಾಗೂ ದಾವಣಗೆರೆ ವಲಯದ ಐಜಿ ರವಿಕಾಂತೇಗೌಡ ಅವರಿಂದಲೂ ಘಟನೆ ಕುರಿತು ಮಾಹಿತಿ ಪಡೆದುಕೊಂಡರು.

ಮುಖ್ಯಮಂತ್ರಿಯವರು ಸಿಂಧನೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿ ಬಳಿಕ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande