
ಕೊಪ್ಪಳ, 03 ಜನವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಪಿ.ರಘು ಅವರು ಜನವರಿ 7 ರಂದು ಕೊಪ್ಪಳ ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದು, ಪೌರ ಕಾರ್ಮಿಕರೊಂದಿಗೆ ನೇರ ಸಂವಾದ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಅಧ್ಯಕ್ಷರು ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಕೊಪ್ಪಳ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಇತರೆ ಸಂಸ್ಥೆಗಳ ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ನಡೆಸುವರು ಹಾಗೂ ಪೌರಕಾರ್ಮಿಕರು/ಸ್ವಚ್ಛತಾ ಕಾರ್ಮಿಕರಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಜಿಲ್ಲೆಯ ಎಲ್ಲ ಪೌರಕಾರ್ಮಿಕರು ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್