ಸಾವಿತ್ರಿಬಾಯಿ ಫುಲೆ ಜಯಂತಿ ; ಅಮಿತ್ ಶಾ ಗೌರವ ನಮನ
ನವದೆಹಲಿ, 03 ಜನವರಿ (ಹಿ.ಸ.) : ಆ್ಯಂಕರ್ : ಮಹಿಳಾ ಶಿಕ್ಷಣ ಹಾಗೂ ಸಾಮಾಜಿಕ ಸುಧಾರಣೆಯ ಪ್ರವರ್ತಕರಾದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಮಹಿಳೆಯರನ್ನು ಶಿಕ್ಷಣ
Pule


ನವದೆಹಲಿ, 03 ಜನವರಿ (ಹಿ.ಸ.) :

ಆ್ಯಂಕರ್ : ಮಹಿಳಾ ಶಿಕ್ಷಣ ಹಾಗೂ ಸಾಮಾಜಿಕ ಸುಧಾರಣೆಯ ಪ್ರವರ್ತಕರಾದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಮಹಿಳೆಯರನ್ನು ಶಿಕ್ಷಣದ ಮೂಲಭೂತ ಹಕ್ಕಿಗೆ ಜೋಡಿಸುವ ಮೂಲಕ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು ನೀಡಿದರು ಎಂದು ಅಮಿತ್ ಶಾ ಸ್ಮರಿಸಿದರು.

ಸಾಮಾಜಿಕ ದುಷ್ಕೃತ್ಯಗಳು ಮತ್ತು ಅಂಧಶ್ರದ್ಧೆಗಳ ವಿರುದ್ಧ ಹೋರಾಡಿದ ಅವರು, ದೇಶದ ಮೊದಲ ಬಾಲಕಿಯರ ಶಾಲೆಯನ್ನು ಸ್ಥಾಪಿಸುವ ಮೂಲಕ ಸಾಮಾಜಿಕ ಪರಿವರ್ತನೆಯ ಬಲವಾದ ನೆಲೆ ನಿರ್ಮಿಸಿದರು ಎಂದು ಹೇಳಿದರು.

ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಜಾಗೃತಿಯ ಮನೋಭಾವವನ್ನು ಬೆಳೆಸಿದ ಸಾವಿತ್ರಿಬಾಯಿ ಫುಲೆ ಅವರ ಸ್ಪೂರ್ತಿದಾಯಕ ಜೀವನವು ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಲ್ಲಿ ಶಾಶ್ವತವಾಗಿ ಮಾರ್ಗದರ್ಶಕ ಶಕ್ತಿಯಾಗಿಯೇ ಉಳಿಯಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande