
ಬೆಂಗಳೂರು, 03 ಜನವರಿ (ಹಿ.ಸ.) :
ಆ್ಯಂಕರ್ : ಮಹಿಳಾ ಸಬಲೀಕರಣಕ್ಕಾಗಿ ಶಿಕ್ಷಣವನ್ನು ಶಕ್ತಿಶಾಲಿ ಸಾಧನವಾಗಿಸಿಕೊಂಡು, ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ದೇಶದ ಹೆಣ್ಣುಮಕ್ಕಳಿಗಾಗಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ, ಅವರಿಗೆ ಜ್ಞಾನ ಹಾಗೂ ಘನತೆಯ ಬದುಕನ್ನು ಧಾರೆಯೆರೆದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಅವರಿಗೆ ಅವರ ಜನ್ಮದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮನ ಸಲ್ಲಿಸಿದ್ದಾರೆ.
ಸಾವಿತ್ರಿಬಾಯಿ ಫುಲೆ ಅವರ ಜೀವನ ಮತ್ತು ಹೋರಾಟವು ಸಮಾಜದಲ್ಲಿ ಸಮಾನತೆ ಹಾಗೂ ಶಿಕ್ಷಣದ ಮಹತ್ವವನ್ನು ಪ್ರತಿಪಾದಿಸಿದ ಮಹಾನ್ ಆದರ್ಶವಾಗಿದ್ದು, ಅವರ ಕನಸಾದ ಶಿಕ್ಷಿತ ಸಮಾಜ ನಿರ್ಮಾಣವನ್ನು ಸಾಕಾರಗೊಳಿಸುವ ಸಂಕಲ್ಪವನ್ನು ಈ ದಿನ ಎಲ್ಲರೂ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.
ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆಗೆ ಭದ್ರ ನೆಲೆ ನಿರ್ಮಿಸಿದ ಸಾವಿತ್ರಿಬಾಯಿ ಫುಲೆ ಅವರ ಚಿಂತನೆಗಳು ಇಂದಿಗೂ ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ದಾರಿದೀಪವಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa