
ಬೆಂಗಳೂರು, 03 ಜನವರಿ (ಹಿ.ಸ.) :
ಆ್ಯಂಕರ್ : ಅಕ್ಷರದವ್ವ ಹಾಗೂ ಕ್ರಾಂತಿಜ್ಯೋತಿ ಎಂದೇ ಖ್ಯಾತರಾಗಿರುವ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಭಾರತದ ಪ್ರಥಮ ಮಹಿಳಾ ಶಿಕ್ಷಕಿಯಾಗಿ ಅಸಮಾನತೆ, ಅಂಧಶ್ರದ್ಧೆ ಮತ್ತು ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಸತ್ಯಶೋಧಕಿ ಸಾವಿತ್ರಿಬಾಯಿ ಫುಲೆ ಅವರು ಸ್ತ್ರೀಕುಲಕ್ಕೆ ಅಕ್ಷರ ಜ್ಞಾನದ ದಾರಿದೀಪವಾಗಿದ್ದರು ಎಂದು ಅವರು ಸ್ಮರಿಸಿದರು. ಮಹಿಳಾ ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆಗೆ ಭದ್ರ ನೆಲೆ ನಿರ್ಮಿಸಿದ ಅವರ ಜೀವನ ಮತ್ತು ಹೋರಾಟವು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಉಪ ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa