ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಗ್ರಂಥಾಲಯ ಪ್ರಾರಂಭ
ಹುಬ್ಬಳ್ಳಿ, 04 ಜನವರಿ (ಹಿ.ಸ.) : ಆ್ಯಂಕರ್ : ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪ್ರಾರಂಭಗೊಂಡ “ಏರ್ಪೊರ್ಟ್ ಲೈಬ್ರರಿ”ಯನ್ನು ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ
Library


ಹುಬ್ಬಳ್ಳಿ, 04 ಜನವರಿ (ಹಿ.ಸ.) :

ಆ್ಯಂಕರ್ : ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪ್ರಾರಂಭಗೊಂಡ “ಏರ್ಪೊರ್ಟ್ ಲೈಬ್ರರಿ”ಯನ್ನು ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಗ್ರಂಥಾಲಯವು ಪ್ರಾರಂಭಗೊಂಡಿದ್ದು, ಈ ಮೂಲಕ ಪ್ರಯಾಣಿಕರ ಕಾಯುವ ಸಮಯವನ್ನು ಉಪಯುಕ್ತವಾಗಿಸುವ ಮತ್ತು ಜ್ಞಾನವನ್ನು ಹಂಚುವ ಉತ್ತಮ ಕಾರ್ಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಾದ ರೂಪೇಶ ಕುಮಾರ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷರಾದ ಶ್ರೀಮತಿ ಅಂಜನಾ ಬಸನಗೌಡರ, ಪ್ರಮುಖರಾದ ಅರುಣ ಭಂಡಾರಿ, ವೀರೇಶ ಹಂಡಗಡಗಿ, ದೀಪಕ ಪಾಟೀಲ,ಶ್ರೀಮತಿ ರೀಟಾ ಹಂಡಾ, ಶ್ರೀಮತಿ ಸ್ಮಿತಾ ಮಹೇಶ ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande