
ಧಾರವಾಡ, 04 ಜನವರಿ (ಹಿ.ಸ.) :
ಆ್ಯಂಕರ್ : ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 2025 ರಲ್ಲಿ ಪ್ರಥಮವಾಗಿ ಮುದ್ರಣಗೊಂಡ ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪ್ರತಿ ಶೀರ್ಷಿಕೆಯ ಮೂರು ಪ್ರತಿಗಳನ್ನು ಮುಫತ್ತಾಗಿ ಸಲ್ಲಿಸಿ, ಜನೆವರಿ 31, 2026 ರ ಸಂಜೆ 5.30 ರೊಳಗಾಗಿ ನೋಂದಣಿ ಮಾಡಿಸಬೇಕು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಗರ ಕೇಂದ್ರ ಗ್ರಂಥಾಲಯ ದೂರವಾಣಿ ಸಂಖ್ಯೆ:- 0836-2972183, ಹಾಗೂ ಆಯುಕ್ತರ ಕಛೇರಿ ದೂರವಾಣಿ ಸಂಖ್ಯೆ: 080-22864990, 22867358 ಮತ್ತು ರಾಜ್ಯ ಕೇಂದ್ರ ಗ್ರಂಥಾಲಯದ ದೂರವಾಣಿ ಸಂಖ್ಯೆ: 080-22212128 ಗೆ ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa