72ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ಗೆ ಇಂದು ಪ್ರಧಾನಿ ಮೋದಿ ಚಾಲನೆ
ನವದೆಹಲಿ, 04 ಜನವರಿ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 72ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಅನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಸಮಾರಂಭವು ಉತ್ತರ ಪ್ರದೇಶದ ವಾರಣಾಸಿಯ ಡಾ. ಸಂಪೂರ್ಣಾನಂದ ಕ್ರೀಡಾಂಗಣದಲ
Pm


ನವದೆಹಲಿ, 04 ಜನವರಿ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 72ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಅನ್ನು ಉದ್ಘಾಟಿಸಲಿದ್ದಾರೆ.

ಉದ್ಘಾಟನಾ ಸಮಾರಂಭವು ಉತ್ತರ ಪ್ರದೇಶದ ವಾರಣಾಸಿಯ ಡಾ. ಸಂಪೂರ್ಣಾನಂದ ಕ್ರೀಡಾಂಗಣದಲ್ಲಿ ನಡೆಯಲಿದೆ.

ಎಂಟು ದಿನಗಳ ಈ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟವು ಜನವರಿ 11ರಂದು ಮುಕ್ತಾಯಗೊಳ್ಳಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಈ ಮಾಹಿತಿಯನ್ನು ಭಾರತೀಯ ಜನತಾ ಪಕ್ಷ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಹಂಚಿಕೊಂಡಿದೆ.

ಅಧಿಕೃತ ಮಾಹಿತಿಯಂತೆ, ದೇಶದ ವಿವಿಧ ರಾಜ್ಯಗಳು ಮತ್ತು ಸಂಸ್ಥೆಗಳನ್ನು ಪ್ರತಿನಿಧಿಸುವ ಒಟ್ಟು 58 ತಂಡಗಳು ಈ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿದ್ದು, 1,000ಕ್ಕೂ ಹೆಚ್ಚು ವಾಲಿಬಾಲ್ ಆಟಗಾರರು ಕ್ರೀಡಾಂಗಣದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.

ಈ ಪಂದ್ಯಾವಳಿ ಭಾರತೀಯ ವಾಲಿಬಾಲ್ ಕ್ರೀಡೆಯಲ್ಲಿನ ಉನ್ನತ ಮಟ್ಟದ ಸ್ಪರ್ಧೆ, ಕ್ರೀಡಾ ಮನೋಭಾವ ಮತ್ತು ಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಲಿದೆ ಎಂದು ಆಯೋಜಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಆಯೋಜನೆಯು ನಗರದ ಕ್ರೀಡಾ ಮೂಲಸೌಕರ್ಯ ಬಲವರ್ಧನೆ ಹಾಗೂ ಅಥ್ಲೆಟಿಕ್ ಅಭಿವೃದ್ಧಿಗೆ ನೀಡುತ್ತಿರುವ ಮಹತ್ವವನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ, ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಿಗೆ ಕೇಂದ್ರವಾಗುವ ದಿಕ್ಕಿನಲ್ಲಿ ವಾರಣಾಸಿಯ ಗುರುತನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಆತಿಥ್ಯ ವಹಿಸುವಲ್ಲಿ ನಗರದ ಬೆಳೆಯುತ್ತಿರುವ ಪಾತ್ರವನ್ನೂ ಸ್ಪಷ್ಟಪಡಿಸುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande