
ಬೆಂಗಳೂರು, 04 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರು–ಗುಂತಕಲ್ ರೈಲ್ವೆ ವಿಭಾಗದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ವಿ. ಸೋಮಣ್ಣ ಅವರು ಇಂದು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪೆನುಕೊಂಡ–ಧರ್ಮಾವರಂ ಜೋಡಿ ಮಾರ್ಗ ನಿರ್ಮಾಣ ಕಾರ್ಯವು ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಸಚಿವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.
ಅದರೊಂದಿಗೆ ಬೆಂಗಳೂರು–ಬಳ್ಳಾರಿ ರೈಲ್ವೆ ವಿಭಾಗದಲ್ಲಿ ರೈಲು ಸಂಚಾರದ ವೇಗವನ್ನು ಹೆಚ್ಚಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಮೂಲಸೌಕರ್ಯ ಅಭಿವೃದ್ಧಿ, ಹಳಿ ಸುಧಾರಣೆ ಹಾಗೂ ತಾಂತ್ರಿಕ ಕಾರ್ಯಗಳ ಬಗ್ಗೆಯೂ ಸಚಿವರು ಸಮಗ್ರವಾಗಿ ಪರಿಶೀಲನೆ ನಡೆಸಿದರು. ಈ ಯೋಜನೆಗಳು ಪೂರ್ಣಗೊಂಡಲ್ಲಿ ಪ್ರಯಾಣಿಕರಿಗೆ ವೇಗವಾದ ಮತ್ತು ಸುಗಮ ರೈಲು ಸೇವೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ವಿವರಿಸಿದರು.
ಪರಿಶೀಲನಾ ಸಂದರ್ಭದಲ್ಲಿ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದು, ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಹಾಗೂ ಮುಂದಿನ ಹಂತದ ಯೋಜನೆಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ರೈಲ್ವೆ ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa