ಸ್ವಾತಂತ್ರ್ಯದ ಓಟ ಕಾದಂಬರಿಯ ರಂಗಪ್ರಯೋಗಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ
ಶಿವಮೊಗ್ಗ, 05 ಜನವರಿ (ಹಿ.ಸ.) : ಆ್ಯಂಕರ್ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ರಂಗಾಯಣ, ಶಿವಮೊಗ್ಗ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸುವ ಯೋಜನೆ ಹಮ್ಮಿಕೊಂಡಿದ್ದು, ಈ ಯೋಜನೆಗೆ 2026 ರ
ಸ್ವಾತಂತ್ರ್ಯದ ಓಟ ಕಾದಂಬರಿಯ ರಂಗಪ್ರಯೋಗಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ


ಶಿವಮೊಗ್ಗ, 05 ಜನವರಿ (ಹಿ.ಸ.) :

ಆ್ಯಂಕರ್ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ರಂಗಾಯಣ, ಶಿವಮೊಗ್ಗ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸುವ ಯೋಜನೆ ಹಮ್ಮಿಕೊಂಡಿದ್ದು, ಈ ಯೋಜನೆಗೆ 2026 ರ ಫೆಬ್ರವರಿಯಿಂದ 2026 ರ ಜೂನ್‌ವರೆಗೆ ಐದು ತಿಂಗಳ ಅವಧಿಗೆ ರೆಪರ್ಟರಿ ಕಲಾವಿದರಲ್ಲದೇ 15 ಜನ ಆಸಕ್ತ ಹಾಗೂ ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲಾವಿದರ ವಯಸ್ಸು ಕನಿಷ್ಟ 20 ರಿಂದ ಗರಿಷ್ಟ 40 ಇರಬೇಕು. ಆಯ್ಕೆಯಾದ ಕಲಾವಿದರಿಗೆ ಮಾಹೆಯಾನ ರೂ.22 ಸಾವಿರ ಗೌರವ ಸಂಭಾವನೆ, ಊಟ, ಉಪಹಾರ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುವುದು.

ಯೋಜನೆಯು 5 ತಿಂಗಳ ಅವಧಿಯಾಗಿದ್ದು ಅರ್ಜಿ ಸಲ್ಲಿಸಲು ಜ.16 ಕಡೆಯ ದಿನವಾಗಿರುತ್ತದೆ. ಅರ್ಜಿಯನ್ನು ಆಡಳಿತಾಧಿಕಾರಿಗಳು, ರಂಗಾಯಣ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ 577201 ಇಲ್ಲಿಗೆ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೇಲ್ admin.rangayanashivamogga@gmail.com ಮೂಲಕ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರಂಗಾಯಣ, ಶಿವಮೊಗ್ಗ ಕಚೇರಿ, ದೂರವಾಣಿ ಸಂಖ್ಯೆ : 08182-256353, 7975229166 ನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿಯೊಂದಿಗೆ ತಮ್ಮ ಇತ್ತೀಚಿನ ಭಾವಚಿತ್ರ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ರಂಗಭೂಮಿ ಅನುಭವದ ವಿವರ, ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಬೇಕೆಂದು ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande