
ಹಾಸನ, 05 ಜನವರಿ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನ ಕ್ರೀಡಾ ಪಟುಗಳಿಗೆ ಸಾಧನೆ ಯೋಜನೆಯಡಿ ಸಹಾಯಧನಕ್ಕಾಗಿ 2025-26ನೇ ಸಾಲಿನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಾಸನ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಹ ವಿಕಲಚೇತನರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಜ.31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, 9ನೇ ಕ್ರಾಸ್, ಶಂಕರಮಠ ರಸ್ತೆ, ಕೆ.ಆರ್.ಪುರಂ, ಹಾಸನ ದೂರವಾಣಿ ಸಂಖ್ಯೆ; 08172-264546/295546 ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದೇಶ ಪುನರ್ವಸತಿ ಕಾರ್ಯಕರ್ತರುಗಳ ದೂರವಾಣಿ ಸಂಖ್ಯೆ ಹಾಸನ-9964536271,ಚನ್ನರಾಯಪಟ್ಟಣ-9731401621, ಅರಸೀಕೆರೆ-9902649777, ಹೊಳೆನರಸೀಪುರ-9844229927, ಬೇಲೂರು-9148693527, ಆಲೂರು-9844572560 ಅರಕಲಗೂಡು-9902757869,ಸಕಲೇಶಪುರ-9482262448 ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa