
ಧಾರವಾಡ, 05 ಜನವರಿ (ಹಿ.ಸ.) :
ಆ್ಯಂಕರ್ : ಧಾರವಾಡದ ರಾಯಾಪುರ ಸಮೀಪದ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪೆಟ್ರೋಲ್ ಬಂಕ್ ಬಳಿ ಕಳೆದ ರಾತ್ರಿ ಭೀಕರ ಬೈಕ್ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ವಿಜಯಪುರದ ಪ್ರಜ್ವಲ್ (26) ಹಾಗೂ ಹುಬ್ಬಳ್ಳಿಯ ಶಂಕರ (26) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಮಾಹಿತಿ ಪಡೆದ ಪೊಲೀಸರು ಶವಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಅಪಘಾತಗೊಂಡ ಬೈಕ್ ಪರಿಶೀಲನೆ ವೇಳೆ ಮಧ್ಯದ ಬಾಟಲ್ ಹಾಗೂ ಗಾಂಜಾ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಸಂಬಂಧ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa