ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ನೆರವು ದೊರೆಯಬೇಕು : ನ್ಯಾ. ಹೇಮಾವತಿ
ಹಾಸನ, 05 ಜನವರಿ (ಹಿ.ಸ.) : ಆ್ಯಂಕರ್ : ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ಅರಿವಿರಬೇಕು ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ನೆರವು ದೊರೆಯಬೇಕು ಎಂಬುದು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಹಾಸನ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ
Law chamber


ಹಾಸನ, 05 ಜನವರಿ (ಹಿ.ಸ.) :

ಆ್ಯಂಕರ್ : ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ಅರಿವಿರಬೇಕು ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ನೆರವು ದೊರೆಯಬೇಕು ಎಂಬುದು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಹಾಸನ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಹೇಮಾವತಿ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು

ಸಾರ್ವಜನಿಕರಿಗೆ ಕಾನೂನು ನೆರವು ಎಲ್ಲಿ ಪಡೆಯಬೇಕು ಎಂಬ ಅರಿವು ಇರುವುದಿಲ್ಲ, ವಕೀಲರಿಂದ ಮಾಹಿತಿ ಪಡೆಯಲು ಹಣ ಭರಿಸುವ ಶಕ್ತಿ ಇಲ್ಲದೆ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ವಿಫಲರಾಗುತ್ತಾರೆ ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಸಲಹಾ ಕೇಂದ್ರ ಸ್ಥಾಪಿಸಲಾಗಿದ್ದು ಸಾರ್ವಜನಿಕರು ಮುಂದೆ ಉಚಿತ ಕಾನೂನು ಸಲಹಾ ಕೇಂದ್ರದ ನೆರವು ಪಡೆದುಕೊಳ್ಳಬಹುದಾಗಿದೆ ಎಂದರು.

ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಚ್ಚ ನ್ಯಾಯಾಲಯದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತದೆ ಕಾನೂನಿನ ಸಲಹೆ ಅವಶ್ಯಕತೆ ಇರುವವರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande