ಬಿಜೆಪಿ ಆಡಳಿತದಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಧಕ್ಕೆ : ಕೆ.ವಿ ಗೌತಮ್
ಬಿಜೆಪಿ ಆಡಳಿತದಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಧಕ್ಕೆ : ಕೆ.ವಿ ಗೌತಮ್
ಕೋಲಾರ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೌತಮ್ ಮಾತನಾಡಿದರು.


ಕೋಲಾರ, ೦೫ ಜನವರಿ (ಹಿ.ಸ) :

ಆ್ಯಂಕರ್ : ಬಿಜೆಪಿ ಪಕ್ಷವು ಅನ್ಯ ಮಾರ್ಗದಿಂದ ಅಧಿಕಾರಕ್ಕೆ ಬಂದದ್ದರಿ0ದ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದೆ. ಅದನ್ನು ರಕ್ಷಣೆ ಮಾಡಲು ಕಾಂಗ್ರೆಸ್ ಪಕ್ಷದ ಹೋರಾಟ ಅನಿವಾರ್ಯವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ವಿ ಗೌತಮ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿಗೆ ನೂತನವಾಗಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಪ್ರಸ್ತುತ ಬಿಜೆಪಿ ಆಡಳಿತದಲ್ಲಿ ಬಡವರು. ದಲಿತರು. ಹಿಂದುಳಿದ ವರ್ಗಗಳನ್ನು ನಿರ್ಲಕ್ಷ್ಯ ತೋರಿದ್ದಾರೆ ಅದೇ ಅಂಬಾನಿ ಮತ್ತು ಅದಾನಿಯಂತಹ ಬಂಡವಾಳಶಾಹಿಗಳ ಕೈ ಬಲಪಡಿಸಿದ್ದಾರೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸದಿದ್ದರೆ, ನಮ್ಮಗಳ ಭವಿಷ್ಯದೊಂದಿಗೆ ಇಡೀ ವ್ಯವಸ್ಥೆ ಆಳು ಮಾಡಲಿದ್ದಾರೆ ಎಂದರು.

ಕೇ0ದ್ರದಲ್ಲಿ ಬಿಜೆಪಿ ಸರ್ಕಾರದಿಂದ ಯುವಜನತೆ ಅತಿ ಹೆಚ್ಚು ಸಂಕಷ್ಟ ಅನುಭವಿಸಿದ್ದಾರೆ. ನಿರುದ್ಯೋಗ ದರ ಗರಿಷ್ಠ ಮಟ್ಟದಲ್ಲಿದ್ದು, ದೇಶದೆಲ್ಲೆಡೆ ಬಿಕ್ಕಟ್ಟಿನ ಪರಿಸ್ಥಿತಿ ಸೃಷ್ಟಿಯಾಗಿದೆ ರೈತರ ಆದಾಯ ದ್ವಿಗುಣಗೊಳಿಸುವುದು, ಯುವಜನತೆಗೆ ಪ್ರತಿವರ್ಷ ಎರಡು ಕೋಟಿ ಉದ್ಯೋಗಾವಕಾಶ ಮತ್ತು ಕಪ್ಪು ಹಣ ಮರಳಿ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ೧೫ ಲಕ್ಷ ಜಮೆ ಮಾಡುವುದಾಗಿ ಹೇಳಿದ ಭರವಸೆಗಳು ಒಂದಾದರೂ ಈಡೇರಿಸಿಲ್ಲ ಅದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಅಷ್ಟು ಭರವಸೆಗಳನ್ನು ಬಡವರಿಗೆ ಕೊಟ್ಟಿದೆ ಎಂದರು.

ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಅಫ್ಸರ್ ಹಾಗೂ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಕೆವಿ ಗೌತಮ್ ಅವರ ನಾಯಕತ್ವ ಅವಶ್ಯಕತೆ ಇದೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೆ ಹುಮ್ಮಸ್ಸು ತರಬೇಕು ಜೊತೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಯೋಜನೆಗಳನ್ನು ಜನಕ್ಕೆ ತಲುಪಿಸುವ ಕೆಲಸವನ್ನು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ವೇಮಗಲ್ -ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೋಮಲ್ ನಿರ್ದೇಶಕರಾದ ಚಂಜಿಮಲೆ ಬಿ ರಮೇಶ್, ಷಂಷೀರ್, ಮುಖಂಡರಾದ ರಾಜಕಲ್ಲಹಳ್ಳಿ ಕೆ.ಸಿ.ಶ್ರೀನಿವಾಸ್, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಖಾದ್ರಿಪುರ ಬಾಬು, ಗೋವಿಂದರಾಜು, ವೀರೇಂದ್ರ ಪಾಟೀಲ್, ಚಿನ್ನಾಪುರ ನಾರಾಯಣಸ್ವಾಮಿ, ಯಲವಾರ ರಾಜಕುಮಾರ್, ನದೀಮ್, ಜಗನ್ ಜಗದೀಶ್, ವಾಸಿಮ್, ನರಸಾಪುರ ನವೀನ್, ಮಠಪುರ ಮುನಿರಾಜ್, ಹಾರೋಹಳ್ಳಿ ರಾಜೇಶ್, ರಾಮಸಂದ್ರ ಕುಮಾರ್, ಬೆಟ್ಟಹೊಸಪುರ ಚೌಡಪ್ಪ , ಪಾರ್ಶಗಾನಹಳ್ಳಿ ಟೈಲರ್ ಶಿವಕುಮಾರ್ ಭಾಗವಹಿಸಿದ್ದರು.

ಚಿತ್ರ : ಕೋಲಾರ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೌತಮ್ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande