
ಚಿತ್ರದುರ್ಗ, 05 ಜನವರಿ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇದೇ ಜ.7 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿಗಳ ಆಚರಣೆ ಕುರಿತಂತೆ ಪೂರ್ವಭಾವಿ ಸಭೆ ಕರೆಯಲಾಗಿದೆ.
ಜ.14ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಿಸುವ ಕುರಿತು ಬೆಳಿಗ್ಗೆ 10:30ಕ್ಕೆ, ಜ.19ರಂದು ಮಹಾಯೋಗಿ ವೇಮನ ಜಯಂತಿ ಆಚರಿಸುವ ಕುರಿತು ಬೆಳಿಗ್ಗೆ 11.15ಕ್ಕೆ ಹಾಗೂ ಜ.21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತು ಮಧ್ಯಾಹ್ನ 12ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು. ಪೂರ್ವಭಾವಿ ಸಭೆಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa