ಪ್ರಜಾಸತ್ತಾತ್ಮಕ ಸಮಾಜದ ನಿರ್ಮಾಣದಲ್ಲಿ ವಕೀಲರ ಪಾತ್ರ ಮುಖ್ಯ : ಸಚಿವ ಸೋಮಣ್ಣ
ಕೊಪ್ಪಳ, 05 ಜನವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾ ವಕೀಲರ ಸಂಘದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭಾಗವಹಿಸಿ, 2047ರೊಳಗೆ ವಿಕಸಿತ ಭಾರತ ನಿರ್ಮಾಣ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೃಷ್ಠಿಕೋನ ಹಾಗೂ ಅವರ ನಾಯಕತ್ವದಲ್ಲಿ ಇದುವರೆಗೆ ಕೈಗೊಂಡಿರುವ
Soomanna


ಕೊಪ್ಪಳ, 05 ಜನವರಿ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾ ವಕೀಲರ ಸಂಘದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭಾಗವಹಿಸಿ, 2047ರೊಳಗೆ ವಿಕಸಿತ ಭಾರತ ನಿರ್ಮಾಣ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೃಷ್ಠಿಕೋನ ಹಾಗೂ ಅವರ ನಾಯಕತ್ವದಲ್ಲಿ ಇದುವರೆಗೆ ಕೈಗೊಂಡಿರುವ ಮಹತ್ವದ ಸುಧಾರಣೆಗಳ ಕುರಿತು ವಕೀಲರು ಹಾಗೂ ಬುದ್ಧಿಜೀವಿಗಳನ್ನುದ್ದೇಶಿಸಿ ಮಾತನಾಡಿದರು.

ದೇಶದ ಆಡಳಿತ ವ್ಯವಸ್ಥೆ, ಆರ್ಥಿಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ, ನ್ಯಾಯಾಂಗ ಪ್ರಕ್ರಿಯೆಗಳ ಸುಧಾರಣೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳು ದೇಶವನ್ನು ಹೊಸ ದಿಕ್ಕಿನತ್ತ ಕರೆದೊಯ್ಯುತ್ತಿವೆ ಎಂದು ಅವರು ಹೇಳಿದರು. ಸ್ವಸ್ಥ, ನ್ಯಾಯಸಮ್ಮತ ಹಾಗೂ ಪ್ರಜಾಸತ್ತಾತ್ಮಕ ಸಮಾಜದ ನಿರ್ಮಾಣದಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಕಾನೂನು ಪ್ರಭುತ್ವವನ್ನು ಬಲಪಡಿಸುವಲ್ಲಿ ವಕೀಲರು ನೀಡುತ್ತಿರುವ ಕೊಡುಗೆ ಶ್ಲಾಘನೀಯವೆಂದು ಸೋಮಣ್ಣ ಹೇಳಿದರು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಎ.ವಿ. ಕಣವಿ, ಮುಖಂಡರಾದ ಶ್ರೀ ಬಸವರಾಜ ಕ್ಯಾವಟೂರ್, ಮಾಜಿ ಶಾಸಕರಾದ ಶ್ರೀ ಬಸವರಾಜ ದಢೇಸುಗೂರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ. ನಮೋಜಿ, ಶ್ರೀಮತಿ ಹೇಮಲತಾ ನಾಯಕ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ.ಎಲ್. ಹಾದಿಮನಿ ಸೇರಿದಂತೆ ಅನೇಕ ಗಣ್ಯರು ಹಾಗೂ ವಕೀಲರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande