ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ; ಮೂವರು ಅಪ್ರಾಪ್ತರ ಬಂಧನ
ಬೆಂಗಳೂರು, 05 ಜನವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಜೆಜೆ ನಗರದ ವಿಎಸ್ ಗಾರ್ಡನ್‌ನಲ್ಲಿರುವ ಓಂ ಶಕ್ತಿ ದೇವಸ್ಥಾನದ ಬಳಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ,ಮೂವರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ
Parmeshwar


ಬೆಂಗಳೂರು, 05 ಜನವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಜೆಜೆ ನಗರದ ವಿಎಸ್ ಗಾರ್ಡನ್‌ನಲ್ಲಿರುವ ಓಂ ಶಕ್ತಿ ದೇವಸ್ಥಾನದ ಬಳಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ,ಮೂವರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ (ಜ.4) ದೇವಿಯ ತೇರು ಎಳೆಯುವ ವೇಳೆ ಕಿಡಿಗೇಡಿಗಳು ತೇರಿನ ಮೇಲೆ ಹಾಗೂ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ 15 ರಿಂದ 17 ವರ್ಷದೊಳಗಿನ ಬಾಲಕರು ಭಾಗಿಯಾಗಿದ್ದು, ಎಲ್ಲರನ್ನೂ ಬಂಧಿಸಲಾಗಿದೆ. ಪ್ರಕರಣವು ಬಾಲಾಪರಾಧ ಕಾಯ್ದೆಯ ವ್ಯಾಪ್ತಿಗೆ ಬರುತ್ತಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande