ಬಿಡಿಎ ಸಿಬ್ಬಂದಿ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು : ಡಿ.ಕೆ.ಶಿವಕುಮಾರ್
ಬೆಂಗಳೂರು, 06 ಜನವರಿ (ಹಿ.ಸ.) : ಆ್ಯಂಕರ್ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸಿಬ್ಬಂದಿ ಸಾರ್ವಜನಿಕರೊಂದಿಗೆ ಪಾರದರ್ಶಕತೆ ಹಾಗೂ ಮಾನವೀಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದರು. ನಗರದ ಅಂಬೇಡ್ಕ
Dks


ಬೆಂಗಳೂರು, 06 ಜನವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸಿಬ್ಬಂದಿ ಸಾರ್ವಜನಿಕರೊಂದಿಗೆ ಪಾರದರ್ಶಕತೆ ಹಾಗೂ ಮಾನವೀಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದರು.

ನಗರದ ಅಂಬೇಡ್ಕರ್ ವೀದಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬಿಡಿಎ ವತಿಯಿಂದ ಆಯೋಜಿಸಲಾಗಿದ್ದ ಆಡಳಿತ ಸುಧಾರಣೆಗಳು ಹಾಗೂ ಸಾರ್ವಜನಿಕ ಅಹವಾಲು ನಿರ್ವಹಣೆ ವಿಷಯದಡಿ ಬಿಡಿಎ ನೌಕರರಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮವನ್ನು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರೊಂದಿಗೆ ಅವರು ಉದ್ಘಾಟಿಸಿ ಮಾತನಾಡಿದರು.

ಬಿಡಿಎ ತನ್ನ ಸಿಬ್ಬಂದಿಗಾಗಿ ಏಳು ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವಿಧಾನ, ಪರಿಣಾಮಕಾರಿ ಕುಂದುಕೊರತೆ ನಿರ್ವಹಣೆ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರಕ್ರಿಯೆಗಳ ಸರಳೀಕರಣ ಸೇರಿದಂತೆ ಹಲವು ವಿಷಯಗಳ ಕುರಿತು ತರಬೇತಿ ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, “ಬಿಡಿಎ ಕಚೇರಿಗೆ ಹೆಚ್ಚಾಗಿ ನೋವು–ನೊಂದ ಮನಸ್ಥಿತಿಯಲ್ಲಿರುವ ನಾಗರಿಕರು ಬರುತ್ತಾರೆ. ಆದ್ದರಿಂದ ಸಿಬ್ಬಂದಿ ಪ್ರತಿಯೊಬ್ಬರನ್ನೂ ಗೌರವದಿಂದ ಕಾಣಬೇಕು. ಕಾರ್ಯವೈಖರಿಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಲಿ. ಏಜೆಂಟ್‌ಗಳ ಅವ್ಯವಹಾರಗಳಿಗೆ ಅವಕಾಶ ಕೊಡದೆ, ನೇರವಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಸಾರ್ವಜನಿಕ ನಂಬಿಕೆಯನ್ನು ಕಾಪಾಡುವ ಜವಾಬ್ದಾರಿ ಬಿಡಿಎ ಸಿಬ್ಬಂದಿಯ ಮೇಲಿದೆ ಎಂದು ಅವರು ತಿಳಿಸಿ, ಆಡಳಿತದಲ್ಲಿ ಸುಧಾರಣೆ ಮತ್ತು ಸೇವೆಯಲ್ಲಿ ಸ್ಪಷ್ಟತೆ ತರಲು ಇಂತಹ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande