
ಬೆಂಗಳೂರು, 06 ಜನವರಿ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣಾ ಸಿದ್ಧತೆಗಳ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ, ಚಿಕ್ಕೋಡಿ, ಬೆಳಗಾವಿ ಮಹಾನಗರ ಮತ್ತು ಬೆಳಗಾವಿ ಗ್ರಾಮಾಂತರ ಜಿಲ್ಲಾ ಘಟಕಗಳ ವಿಶೇಷ ಸಭೆಗಳನ್ನು ನಡೆಸಿದರು.
ಸಭೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಸಂಘಟನೆ ಬಲಪಡಿಸುವುದು, ಕಾರ್ಯತಂತ್ರ ರೂಪಿಸುವುದು ಹಾಗೂ ಕ್ಷೇತ್ರಮಟ್ಟದ ಸಿದ್ಧತೆಗಳ ಕುರಿತು ಸವಿಸ್ತಾರ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರು, ಸಂಸದರು, ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa