ಸಿದ್ದರಾಮಯ್ಯ ಗೆ ಬಿ.ಕೆ. ಹರಿಪ್ರಸಾದ್ ಅಭಿನಂದನೆ
ಬೆಂಗಳೂರು, 06 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯ ರಾಜಕಾರಣದ ಇತಿಹಾಸದಲ್ಲೇ ಅತಿ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸುತ್ತಿರುವ ಹಾಗೂ ಸಾಮಾಜಿಕ ನ್ಯಾಯದ ದಿಟ್ಟ ಪ್ರತಿಪಾದಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅ
Bk hariprasad


ಬೆಂಗಳೂರು, 06 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಕಾರಣದ ಇತಿಹಾಸದಲ್ಲೇ ಅತಿ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸುತ್ತಿರುವ ಹಾಗೂ ಸಾಮಾಜಿಕ ನ್ಯಾಯದ ದಿಟ್ಟ ಪ್ರತಿಪಾದಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮದ ಮೂಲಕ ಶುಭಾಶಯ ಸಂದೇಶ ನೀಡಿರುವ ಹರಿಪ್ರಸಾದ್, ಈ ನಾಡು ಕಂಡ ದಮನಿತ ವರ್ಗಗಳು ಮತ್ತು ಶೋಷಿತ ಸಮುದಾಯಗಳಿಗೆ ಆಶಾಕಿರಣವಾಗಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಮಾಜವಾದಿ ಮೌಲ್ಯಗಳ ರಕ್ಷಣೆಗೆ ಸದಾ ಕಟ್ಟಿಬದ್ದರಾಗಿರುವ ಸಿದ್ದರಾಮಯ್ಯ ಅವರು, ಬಡವರು, ಹಿಂದುಳಿದವರು ಹಾಗೂ ದೀನ–ದಲಿತರ ಆಶೋತ್ತರಗಳಿಗೆ ಅನುಗುಣವಾಗಿ ಮುಂದಿನ ದಿನಗಳಲ್ಲೂ ರಾಜ್ಯಕ್ಕೆ ಇನ್ನಷ್ಟು ಸೇವೆ ಸಲ್ಲಿಸಲಿ ಎಂದು ಅವರು ಹಾರೈಸಿದ್ದಾರೆ.

ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಜನಪರ ಆಡಳಿತಕ್ಕೆ ಒತ್ತು ನೀಡುವ ಸಿದ್ದರಾಮಯ್ಯ ಅವರ ನಾಯಕತ್ವವು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ವಿಶೇಷ ಸ್ಥಾನ ಪಡೆದಿದೆ ಎಂದು ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande