
ಬಳ್ಳಾರಿ, 06 ಜನವರಿ (ಹಿ.ಸ.) :
ಆ್ಯಂಕರ್ : ಬಳ್ಳಾರಿಯಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ರೆಡ್ಡಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಬಳ್ಳಾರಿಯ ಹಿರಿಯ ಅಧಿಕಾರಿಗಳು, ಜಿಲ್ಲೆಯ ಶಾಸಕರು ಹಾಗೂ ಸಂಸದರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು.
ಈ ಸಭೆಗಳಲ್ಲಿ ಗಲಭೆಗೆ ಸಂಬಂಧಿಸಿದ ಸತ್ಯಾಸತ್ಯತೆಗಳು, ಘಟನೆಗಳ ಹಿನ್ನಲೆ ಹಾಗೂ ತನಿಖೆಯ ಪ್ರಗತಿ ಕುರಿತು ವಿವರವಾದ ಮಾಹಿತಿ ಪಡೆದುಕೊಂಡರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa