ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್
ಗದಗ, 06 ಜನವರಿ (ಹಿ.ಸ.) : ಆ್ಯಂಕರ್ : ಗದಗ ನಗರದ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಐಡಿಗೆ ಔಟ್‌ಲುಕ್ ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಬಂದಿರುವು
ಫೋಟೋ


ಗದಗ, 06 ಜನವರಿ (ಹಿ.ಸ.) :

ಆ್ಯಂಕರ್ : ಗದಗ ನಗರದ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಐಡಿಗೆ ಔಟ್‌ಲುಕ್ ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ.

ಬಾಂಬ್ ಬೆದರಿಕೆ ಮಾಹಿತಿ ತಿಳಿದ ತಕ್ಷಣ ನ್ಯಾಯಾಲಯದಲ್ಲಿದ್ದ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಲಾಗಿದ್ದು, ನ್ಯಾಯಾಲಯದ ಕಾರ್ಯಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಳಿಕ ಶ್ವಾನದಳ, ಬಾಂಬ್ ಪತ್ತೆ ದಳ ಸಿಬ್ಬಂದಿಗಳಿಂದ ನ್ಯಾಯಾಲಯದ ಆವರಣ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಇಂಚಿಂಚಾಗಿ ಶೋಧ ಕಾರ್ಯ ನಡೆಸಲಾಗಿದೆ.

ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಜೊತೆಗೆ ಬಾಂಬ್ ಬೆದರಿಕೆ ಸಂದೇಶದ ಮೂಲ ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದರು. ಡಿವೈಎಸ್ಪಿ ಮುರ್ತುಜಾ ಖಾಜಿ, ಸಿಪಿಐಗಳಾದ ಲಾಲಸಾಬ್ ಜೂಲಕಟ್ಟಿ, ಸಿದ್ದರಾಮೇಶ, ಪಿಎಸ್ಐ ವಿ.ಜಿ. ಪವಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಪರಿಶೀಲನೆ ನಡೆಸಿದರು.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ನ್ಯಾಯಾಲಯದ ಆವರಣ ಹಾಗೂ ಜಿಲ್ಲಾಡಳಿತ ಭವನದ ಸುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರಲ್ಲಿ ಕೆಲಕಾಲ ಭಯದ ವಾತಾವರಣ ಕಂಡುಬಂದಿತು. ಶೋಧ ಕಾರ್ಯ ಪೂರ್ಣಗೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande