ಬಳ್ಳಾರಿ ಗಲಭೆಯಲ್ಲಿ ಮೃತ ರಾಜಶೇಖರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಸಾಂತ್ವನ
ಬಳ್ಳಾರಿ, 06 ಜನವರಿ (ಹಿ.ಸ.) : ಆ್ಯಂಕರ್ : ಬಳ್ಳಾರಿಯಲ್ಲಿ ನಡೆದ ಗಲಭೆಯಲ್ಲಿ ಸಾವನ್ನಪ್ಪಿದ ರಾಜಶೇಖರ್ ರೆಡ್ಡಿ ಅವರ ನಿವಾಸಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಪಕ್ಷದ ನಿಷ್ಠಾವಂತ
Dks


ಬಳ್ಳಾರಿ, 06 ಜನವರಿ (ಹಿ.ಸ.) :

ಆ್ಯಂಕರ್ : ಬಳ್ಳಾರಿಯಲ್ಲಿ ನಡೆದ ಗಲಭೆಯಲ್ಲಿ ಸಾವನ್ನಪ್ಪಿದ ರಾಜಶೇಖರ್ ರೆಡ್ಡಿ ಅವರ ನಿವಾಸಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಅಗಲಿಕೆ ನನಗೆ ತೀವ್ರ ನೋವು ತಂದಿದೆ. ರಾಜಶೇಖರ್ ರೆಡ್ಡಿ ಅವರ ಕುಟುಂಬದೊಂದಿಗೆ ಕಾಂಗ್ರೆಸ್ ಪಕ್ಷ ಸದಾ ನಿಂತಿರುತ್ತದೆ,” ಎಂದು ಭರವಸೆ ನೀಡಿದರು.

ಮೃತರ ಕುಟುಂಬದ ಸದಸ್ಯರು ಸರ್ಕಾರಿ ನೌಕರಿ ನೀಡುವಂತೆ ಮನವಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ಈ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಕಾನೂನು ಚೌಕಟ್ಟಿನಲ್ಲಿ ಇರುವ ಎಲ್ಲ ಅವಕಾಶಗಳನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande