ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು, 06 ಜನವರಿ (ಹಿ.ಸ.) : ಆ್ಯಂಕರ್ : ಬಳ್ಳಾರಿಯಲ್ಲಿ ಹತ್ಯೆಗೀಡಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲ
ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ


ಬೆಂಗಳೂರು, 06 ಜನವರಿ (ಹಿ.ಸ.) :

ಆ್ಯಂಕರ್ : ಬಳ್ಳಾರಿಯಲ್ಲಿ ಹತ್ಯೆಗೀಡಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆದಿದೆ ಎಂದು ನಾನು ಹೇಳಿದ್ದು ಸತ್ಯ. ಸತ್ತ ಶರೀರವನ್ನೂ ರಾಜಕೀಯ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಕೀಳು ನಡವಳಿಕೆಯನ್ನು ಸರ್ಕಾರ ತೋರಿದೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ಮರಣೋತ್ತರ ಪರೀಕ್ಷೆ ಆರೋಪ ಅಸತ್ಯವಾಗಿದ್ದರೆ, ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಅಧೀಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಬೇಕು ಎಂದು ಸವಾಲು ಹಾಕಿದ ಕುಮಾರಸ್ವಾಮಿ, ಆಗ ಮರಣೋತ್ತರ ಪರೀಕ್ಷೆ ಮಾಯಾಜಾಲ ಬಯಲಾಗುತ್ತದೆ. ಇದಕ್ಕೆ ಸರ್ಕಾರ ಸಿದ್ಧವೇ?” ಎಂದು ಪ್ರಶ್ನಿಸಿದ್ದಾರೆ.

ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇದೆ ಎಂದು ಹೇಳಿರುವ ಅವರು, ಬಿಮ್ಸ್ ಅಧೀಕ್ಷಕರ ಹೇಳಿಕೆಯನ್ನೂ ಉಲ್ಲೇಖಿಸಿದರು. “ಅಧೀಕ್ಷಕರ ಪ್ರಕಾರ, ಬೆಳಿಗ್ಗೆ 6 ಗಂಟೆಗೆ ಆರಂಭವಾದ ಮರಣೋತ್ತರ ಪರೀಕ್ಷೆ ಮೂರು ಗಂಟೆಗಳ ಕಾಲ ನಡೆದಿದ್ದು, ದೇಹದಲ್ಲಿ ಅನೇಕ ಗಾಯಗಳು ಮತ್ತು ಚೂರುಗಳು ಇದ್ದವು. ಆದರೆ, ಮೊದಲ ವೈದ್ಯರೇ ಮರಣೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಬಹುದಾಗಿದ್ದರೆ, ಇನ್ನೊಬ್ಬ ವೈದ್ಯರನ್ನು ಕರೆಸಿಕೊಳ್ಳಬೇಕಾದ ಅಗತ್ಯವೇನು?” ಎಂದು ಪ್ರಶ್ನಿಸಿದ್ದಾರೆ.

ಮೃತದೇಹ ಪರೀಕ್ಷೆಗೆ ಎಷ್ಟು ವೈದ್ಯರು ಬೇಕು? ಮರಣೋತ್ತರ ಪರೀಕ್ಷೆ ವೇಳೆ ಜೀವ ಉಳಿಸಬೇಕಿತ್ತಾ ಅಥವಾ ಸತ್ಯ ಹುಡುಕಬೇಕಿತ್ತಾ? ಅಲ್ಲಿ ಕರೆಸಬೇಕಾಗಿದ್ದವರು ಫಾರೆನ್ಸಿಕ್ ತಜ್ಞರು ಎಂದು ಅವರು ವಾಗ್ದಾಳಿ ನಡೆಸಿದರು.

ಪರೀಕ್ಷೆ ವೇಳೆ ಇಬ್ಬರು ವೈದ್ಯರ ನಡುವೆ ನಡೆದ ಅಸಮ್ಮತಿಯ ವಿಚಾರವೂ ನನಗೆ ತಿಳಿದಿದೆ ಎಂದು ಹೇಳಿರುವ ಕುಮಾರಸ್ವಾಮಿ, “ಬಿಮ್ಸ್ ಅಧೀಕ್ಷಕರ ಹೇಳಿಕೆಯಲ್ಲೇ ಪ್ರಶ್ನೆಯೂ ಇದೆ, ಉತ್ತರವೂ ಇದೆ. ಮೊದಲ ವೈದ್ಯರೇ ಪರೀಕ್ಷೆ ಮುಗಿಸಬಹುದಾಗಿದ್ದರೆ, ಎರಡನೇ ವೈದ್ಯರ ಅಗತ್ಯ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಸಮಾಜವನ್ನು ದಿಕ್ಕು ತಪ್ಪಿಸಲು ಅಥವಾ ತನಿಖೆಯನ್ನು ಹಾಳು ಮಾಡಲು ನಾನು ಈ ಮಾತುಗಳನ್ನು ಹೇಳಿಲ್ಲ. ಮೃತದೇಹವನ್ನೂ ರಾಜಕೀಯಕ್ಕೆ ಬಳಸಿಕೊಂಡಿರುವ ಸರ್ಕಾರದ ನಡೆಯನ್ನು ರಾಜ್ಯದ ಜನರ ಮುಂದೆ ತಂದಿದ್ದೇನೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande