
ಚಿತ್ರದುರ್ಗ, 06 ಜನವರಿ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾಸ್ಪತ್ರೆ, ನಗರಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಜ.09ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಚಿತ್ರದುರ್ಗ ನಗರದ ಕರುವಿನಕಟ್ಟೆ ವೃತ್ತ ಸಮೀಪದ ಶ್ರೀ ಕಬೀರಾನಂದ ಸ್ವಾಮಿ ಆಶ್ರಮದಲ್ಲಿ “ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ” ಹಮ್ಮಿಕೊಳ್ಳಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ, ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತಿವಹಿಸುವರು. ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಮದಕರಿಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಭಾಗವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮೀ, ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗಹಿಸುವರು.
ಹೆಚ್ಚಿನ ಮಾಹಿತಿಗಾಗಿ ಶಾಸಕರ ಕಾರ್ಯಾಲಯ ದೂರವಾಣಿ ಸಂಖ್ಯೆ 7996768003, 9591515031, ಶಂಕರ ಕಣ್ಣಿನ ಆಸ್ಪತ್ರೆ-08182-222099, 08182-2221000 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa