
ವಿಜಯಪುರ, 06 ಜನವರಿ (ಹಿ.ಸ.) :
ಆ್ಯಂಕರ್ : ಇದೇ ಜನವರಿ 9ರಂದು ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆ, ಉದ್ಘಾಟನೆ,ಶಿಲಾನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಸುಸೂತ್ರವಾಗಿ ನಿರ್ವಹಿಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ ಹೇಳಿದರು.
ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಬಧಪಟ್ಟ ಅಧಿಕರಾರಿಗಳು ಜವಾಬ್ದಾರಿಯಿಂದ ಕಾರ್ಯನೀರ್ವಸಬೇಕು, ಕಾರ್ಯಕ್ರಮಗಳನ್ನು ಕೈಗೊಂಡಿರುವ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಕಾರ್ಯಕ್ರಮದಲ್ಲಿ ಯಾವದೆರೀತಿಯ ಲೋಪವಾಗದಂತೆ ಮುಂಜಾಗ್ರತೆ ವಸಬೇಕೆಂದು ಅವರು ಸೂಚಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ವಿವಿಧ ಇಲಾಖೆಯ ಸಚಿವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಸಿದ್ಧತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜ.9ರಂದು ಮುಖ್ಯಮಂತ್ರಿಗಳು ಆಗಮಿಸಿ, ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ ಹಾಗೂ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಪ್ರಜಾ ಸೌಧ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಗರದ ದರಬಾರ ಶಾಲಾ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಕಾರ್ಯಕ್ರಮವನ್ನು ಆಯೋಜಿಸಿ,ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಅವರು ಹೇಳಿದರು. ವೇದಿಕೆ ನಿರ್ವಹಣೆ, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ. ಆನಂದ ಕೆ ಮಾತನಾಡಿ ಈಗಾಗಲೇ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಸಕಾಲದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ವೇದಿಕೆ, ಶಾಮಿಯಾನಾ,ಆಸನ ವ್ಯವಸ್ಥೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜನಪ್ರತಿನಿಧಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ವೈದ್ಯರನ್ನು ಹಾಗೂ ಸಿಬ್ಬಂದಿ ಇರುವಂತೆ, ಅಗ್ನಿಶಾಮಕ ವಾಹನ ಸೇರಿದಂತೆ ಸಂಬ0ಧಿಸಿದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಅಧಿಕಾರಿಗಳು ತಮಗೆ ವಹಿಸಿದ ಯಾವುದೇ ಜವಾಬ್ದಾರಿಯನ್ನು ಲೋಪವಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಹಾಗೂ ಶಂಕುಸ್ಥಾಪನಾ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಮಾತನಾಡಿ, ಕಾರ್ಯಕ್ರಮದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಹಾಗೂ ಕಾರ್ಯಕ್ರಮಕ್ಕೆ ಸೂಕ್ತ ಬಂದೊಬಸ್ತ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮವಹಿಸಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರವಾಸೋಧ್ಯಮ ಇಲಾಖೆಯ ವತಿಯಂದಿ ಪ್ರಸಕ್ತ ವರ್ಷದ ವಿಜಯಪುರ ಜಿಲ್ಲೆಯ ಐತಿಹಾಸಿಕ ಹೊಂದಿರುವ ಛಾಯಾಚಿತ್ರದ(ಕ್ಯಾಲೆಂಡರ್) ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ ನಿಗಮದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಶಾಸಕರುಗಳಾದ ವಿಠ್ಠಲ ಕಟಕಧೋಂಡ, ಅಶೋಕ ಮನಗೂಳಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಅಕ್ಕ ಮಹಾದೇವಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೋ. ವಿಜಯಾ ಬಿ ಕೋರಿಶೆಟ್ಟಿ, ಕುಲಸಚಿವರಾದ ಶಂಕರಗೌಡ ಸೋಮನಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ ಮುದ್ದೇಬಿಹಾಳ, ಸಮಾಜ ಕಲ್ಯಾಣ ಉಪ ನಿರ್ದೇಶಕರಾದ ಮಹೇಶ ಪೋತದಾರ, ಪ್ರವಾಸೋಧ್ಯಮ ಇಲಾಖೆಯ ಉಪ ನಿರ್ದೇಶಕರಾದ ಅರವಿಂದ ಹೂಗಾರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ, ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಿತ್ತೂರಾಣಿ ಚೆನ್ನಮ್ಮ ಸಮಿತಿ ಸದಸ್ಯರು, ಸಮಾಜದ ಮುಖಂಡರು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / jyothi deshpande