
ಬೆಂಗಳೂರು, 06 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯದ ಇತಿಹಾಸದಲ್ಲಿ ಅತಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಸರ್ವರಿಗೂ ಸಮಬಾಳು ನೀಡುವ ನಿಮ್ಮ ಆಡಳಿತ ಶೈಲಿ ರಾಜ್ಯಕ್ಕೆ ಮಾದರಿಯಾಗಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ನಿಮಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa