
ಚಿತ್ರದುರ್ಗ, 06 ಜನವರಿ (ಹಿ.ಸ.).:
ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ನಿವೃತ್ತ ನೌಕರರ ದಿನಾಚರಣೆ ಮತ್ತು 2026ನೇ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಇದೇ ಜ.10ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಸದ ಗೋವಿಂದ ಎಂ.ಕಾರಜೋಳ ಉದ್ಘಾಟನೆ ನೆರವೇರಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ.ಪ್ರೇಮನಾಥ್ ಅಧ್ಯಕ್ಷತೆ ವಹಿಸುವರು. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡುವರು. ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ ಪೌರಕಾರ್ಮಿಕರಿಗೆ ಸನ್ಮಾನ ಮಾಡುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಿವೃತ್ತ ಮುಖ್ಯ ಇಂಜಿನಿಯರ್ ಕೆ.ಜಿ.ಜಗದೀಶ್, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಸ್.ಕೆ.ನಾಗೇಂದ್ರ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa