ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಿಗಜಿಣಗಿ ಕಿಡಿ
ವಿಜಯಪುರ, 06 ಜನವರಿ (ಹಿ.ಸ.) : ಆ್ಯಂಕರ್ : ದಿ. ದೇವರಾಜು ಅರಸು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ಹಾಕಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಅರಸು ಅವರು ಸಾಕಷ್ಟು ಅಭಿವೃದ್ಧಿ ಕೆಲಸವನ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಿಗಜಿಣಗಿ ಕಿಡಿ


ವಿಜಯಪುರ, 06 ಜನವರಿ (ಹಿ.ಸ.) :

ಆ್ಯಂಕರ್ : ದಿ. ದೇವರಾಜು ಅರಸು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ಹಾಕಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಅರಸು ಅವರು ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ. ಅಲ್ಲದೇ, ಕಳೆದ ಎರಡು ವರ್ಷದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಅಭಿವೃದ್ಧಿಯನ್ನೆ ಮುಂದುವರಿಸಿಕೊಂಡು ಕಾಂಗ್ರೆಸ್ ಸರ್ಕಾರ ಹೋಗುತ್ತಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande