ಸಾಮಾಜಿಕ ವ್ಯವಸ್ಥೆಯ ಅರಿವೇ ನಿಜವಾದ ಶಿಕ್ಷಣ : ಮುಖ್ಯಮಂತ್ರಿ
ಮೈಸೂರು, 06 ಜನವರಿ (ಹಿ.ಸ.) : ಆ್ಯಂಕರ್ : ಸಾಮಾಜಿಕ ವ್ಯವಸ್ಥೆಯ ಅರಿವೇ ನಿಜವಾದ ಶಿಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಡಾ. ಕೆ. ಶಿವಕುಮಾರ್ ಅವರಿಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯ
Cm


ಮೈಸೂರು, 06 ಜನವರಿ (ಹಿ.ಸ.) :

ಆ್ಯಂಕರ್ : ಸಾಮಾಜಿಕ ವ್ಯವಸ್ಥೆಯ ಅರಿವೇ ನಿಜವಾದ ಶಿಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಡಾ. ಕೆ. ಶಿವಕುಮಾರ್ ಅವರಿಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾತಿ ಹಾಗೂ ಚಾತುರ್ವರ್ಣ ವ್ಯವಸ್ಥೆಯಿಂದ ಉಂಟಾಗಿರುವ ಗುಲಾಮಗಿರಿಯ ಮನಸ್ಥಿತಿಯನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿ, ವೈಚಾರಿಕ–ವೈಜ್ಞಾನಿಕ ಶಿಕ್ಷಣವಿಲ್ಲದೆ ಸಮಾಜವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಯವರ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಅಗತ್ಯವಿದೆ ಎಂದು ಹೇಳಿ, ಸಾಮಾಜಿಕ ವ್ಯವಸ್ಥೆಗಳ ಕುರಿತು ಚಿಂತಿಸುವಲ್ಲಿ ಡಾ. ಶಿವಕುಮಾರ್ ಅವರ ಪಾತ್ರವನ್ನು ಶ್ಲಾಘಿಸಿದರು.

ವಿಧಾನ ಪರಿಷತ್‌ನಲ್ಲಿ ದಲಿತರು, ಧ್ವನಿಯಿಲ್ಲದವರು ಹಾಗೂ ಅವಕಾಶಗಳಿಂದ ವಂಚಿತರಾದವರ ಪರವಾಗಿ ಕೆಲಸ ಮಾಡಬೇಕೆಂದು ಡಾ. ಶಿವಕುಮಾರ್ ಅವರಿಗೆ ಸಲಹೆ ನೀಡಿದರು.

ಕೇಂದ್ರ ಸರ್ಕಾರ ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಯೋಜನೆ ಜಾರಿಗೆ ತರದಿರುವುದನ್ನು ಪ್ರಶ್ನಿಸಿದ ಮುಖ್ಯಮಂತ್ರಿ, ಜಿಎಸ್‌ಟಿ ಹಾಗೂ ಎಂಎನ್‌ಆರ್‌ಇಜಿಎ ಅನುದಾನ ಕಡಿತದಿಂದ ರಾಜ್ಯಕ್ಕೆ ನಷ್ಟವಾಗುತ್ತಿದೆ ಎಂದರು.

ರಾಜಕೀಯ ಸ್ವಾತಂತ್ರ್ಯವು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ನಿಂತಿದೆ ಎಂದು ತಿಳಿಸಿದ ಅವರು, ಅಸಮಾನತೆ ಕಡಿಮೆ ಮಾಡಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು. ಮೈಸೂರು ವಿಶ್ವವಿದ್ಯಾಲಯದ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಹಾಗೂ ನಿವೃತ್ತ ನೌಕರರ ಪಿಂಚಣಿಗೆ ಕ್ರಮ ವಹಿಸುವ ಭರವಸೆಯನ್ನೂ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಹಿರಿಯ ಪತ್ರಕರ್ತರು ಹಾಗೂ ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande