ಉಡುಪಿ ಪರ್ಯಾಯ : ಮೂಲಸೌಕರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ
ಬೆಳಗಾವಿ, 06 ಜನವರಿ (ಹಿ.ಸ.) : ಆ್ಯಂಕರ್ : ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ
Hebalkar


ಬೆಳಗಾವಿ, 06 ಜನವರಿ (ಹಿ.ಸ.) :

ಆ್ಯಂಕರ್ : ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ಬೆಳಗಾವಿಯಿಂದ‌ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಡಿಯೋ ಸಂವಾದದಲ್ಲಿ ಶಾಸಕರಾದ ಸುನಿಲಕುಮಾರ್, ಕಿರಣಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ,

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande