
ಬಳ್ಳಾರಿ, 07 ಜನವರಿ (ಹಿ.ಸ.) :
ಆ್ಯಂಕರ್ : ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜ.09 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಾರ್ತಾಲಾಪ ಕಾರ್ಯಾಗಾರ ಆಯೋಜಿಸಲಾಗಿದೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಬಳ್ಳಾರಿ ಕ್ಷೇತ್ರದ ಲೋಕಸಭಾ ಸದಸ್ಯ ಈ.ತುಕಾರಾಮ್, ಕೊಪ್ಪಳ ಕ್ಷೇತ್ರದ ಲೋಕ ಸಭಾ ಸದಸ್ಯ ಕೆ.ರಾಜಶೇಖರ ಬಸವರಾಜ ಹಿಟ್ನಾಳ್ ಹಾಗೂ ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ. ರವೀಂದ್ರ, ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಬಳ್ಳಾರಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ ಅವರು ಭಾಗವಹಿಸುವರು.
ಕಾರ್ಯಾಗಾರದ ಮೊದಲ ಅಧಿವೇಶನದಲ್ಲಿ ವಿಕಸಿತ ಭಾರತ: ಜಿ ರಾಮ್ ಜಿ ಯೋಜನೆ ವಿಷಯ ಕುರಿತು ಬಳ್ಳಾರಿ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹೆಚ್.ಅಂಬರೀಶ್ ಅವರು ಮಾತನಾಡುವರು.
ನೂತನ ಕಾರ್ಮಿಕ ಕಾನೂನುಗಳ ಕುರಿತು ಕಲಬುರಗಿಯ ಇಎಸ್‍ಐ ಉಪ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಯುವರಾಜ್ ಎಸ್.ವಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಆರ್‍ಸಿಹೆಚ್ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹನುಮಂತಪ್ಪ, ಪಿಎಂ ಸ್ವನಿಧಿ ಯೋಜನೆ ಕುರಿತು ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಡಾ.ಎಸ್.ಸೌಮ್ಯ ಅವರು ಮಾಹಿತಿ ನೀಡುವರು.
ಕಾರ್ಯಾಗಾರದ ಎರಡನೇ ಅಧಿವೇಶನದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ, ಭಾರತೀಯ ಸಾಕ್ಷ್ಯಾ ಅಧಿನಿಯಮ, 2023 ಕುರಿತು ಜಿಲ್ಲಾ ಸರ್ಕಾರಿ ಮಾಜಿ ವಕೀಲರಾದ ಬಿ.ರವೀಂದ್ರನಾಥ ಅವರು ಮಾಹಿತಿ ಹಂಚಿಕೊಳ್ಳುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಮಕೃಷ್ಣ ನಾಯಕ್, ಕೃಷಿ-ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನದ ಕುರಿತು ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ಪಾಟೀಲ್, ಹಣಕಾಸು ಸುರಕ್ಷತೆ ಮತ್ತು ಆರ್ಥಿಕ ಸಬಲೀಕರಣದ ಕುರಿತು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಿರೀಶ್ ವಸಂತರಾವ್ ಕುಲಕರ್ಣಿ ಅವರು ಮಾಹಿತಿ ನೀಡುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್