ಹಾವೇರಿ ಹುಕ್ಕೇರಿಮಠಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಹಾವೇರಿ, 07 ಜನವರಿ (ಹಿ.ಸ.) : ಆ್ಯಂಕರ್ : ಹಾವೇರಿ ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರವಾದ ಹುಕ್ಕೇರಿಮಠಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ, ಪರಮ ತಪಸ್ವಿಗಳಾದ ಲಿಂಗೈಕ್ಯ ಶ್ರೀ ಶಿವಬಸವ ಮಹಾಸ್ವಾಮಿಗಳವರ ಹಾಗೂ ಪರಮಪೂಜ್ಯ ಲಿಂಗೈಕ್ಯ ಶ್ರೀ ಶಿವಲಿಂಗ ಮಹಾಸ್ವಾಮಿಗಳವರ ಪುಣ್ಯ
Dcm


ಹಾವೇರಿ, 07 ಜನವರಿ (ಹಿ.ಸ.) :

ಆ್ಯಂಕರ್ : ಹಾವೇರಿ ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರವಾದ ಹುಕ್ಕೇರಿಮಠಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ, ಪರಮ ತಪಸ್ವಿಗಳಾದ ಲಿಂಗೈಕ್ಯ ಶ್ರೀ ಶಿವಬಸವ ಮಹಾಸ್ವಾಮಿಗಳವರ ಹಾಗೂ ಪರಮಪೂಜ್ಯ ಲಿಂಗೈಕ್ಯ ಶ್ರೀ ಶಿವಲಿಂಗ ಮಹಾಸ್ವಾಮಿಗಳವರ ಪುಣ್ಯ ಗದ್ದುಗೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಠದ ಪರಮಪೂಜ್ಯ ಶ್ರೀ ಸದಾಶಿವ ಮಹಾಸ್ವಾಮೀಜಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ಅವರ ಆಶೀರ್ವಾದವನ್ನು ಪಡೆದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande