ತುಮಕೂರಿನಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಮತ್ತು ವಾಣಿಜ್ಯ ಮೇಳಕ್ಕೆ ಚಾಲನೆ
ತುಮಕೂರು, 07 ಜನವರಿ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಜಿಲ್ಲಾ ಕೃಷಿಕ ಸಮಾಜದ ಸಹಯೋಗದಲ್ಲಿ ನಗರದ ಅಮಾನಿಕೆರೆ ಗಾಜಿನ ಮನೆಯ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ‘ಸಿರಿಧಾನ್ಯ ಹಬ್ಬ ಮತ್ತು ವಾಣಿಜ್ಯ ಮೇಳ’ವನ್ನು ಗ
Mela


ತುಮಕೂರು, 07 ಜನವರಿ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಜಿಲ್ಲಾ ಕೃಷಿಕ ಸಮಾಜದ ಸಹಯೋಗದಲ್ಲಿ ನಗರದ ಅಮಾನಿಕೆರೆ ಗಾಜಿನ ಮನೆಯ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ‘ಸಿರಿಧಾನ್ಯ ಹಬ್ಬ ಮತ್ತು ವಾಣಿಜ್ಯ ಮೇಳ’ವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವರು, ರಾಜ್ಯಾದ್ಯಂತ ಸುಮಾರು 20 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಸಿರಿಧಾನ್ಯಗಳ ಕೃಷಿ ನಡೆಯುತ್ತಿದ್ದು, ಅದರಲ್ಲೂ ತುಮಕೂರು ಜಿಲ್ಲೆಯಲ್ಲಿ 1.70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಸೇರಿದಂತೆ ವಿವಿಧ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಿರಿಧಾನ್ಯಗಳ ಬೆಳವಣಿಗೆಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಸಿರಿಧಾನ್ಯಗಳಿಗೆ 10 ಸಾವಿರ ವರ್ಷಗಳಷ್ಟು ಪುರಾತನ ಇತಿಹಾಸವಿದ್ದು, ಮಾನವನು ಬೆಳೆದ ಮೊದಲ ಕೃಷಿ ಬೆಳೆಗಳಲ್ಲಿ ಅವು ಪ್ರಮುಖ ಸ್ಥಾನ ಹೊಂದಿವೆ. ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಿರಿಧಾನ್ಯಗಳ ಉತ್ಪಾದನೆ ಕ್ರಮೇಣ ಹೆಚ್ಚಾಗುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

1960ರ ದಶಕದವರೆಗೆ ದೇಶದಲ್ಲಿ ಆಹಾರ ಉತ್ಪಾದನೆ ಕೊರತೆಯಲ್ಲಿದ್ದರೂ, 1980ರ ದಶಕದ ನಂತರ ಕೃಷಿ ತಂತ್ರಜ್ಞಾನದಲ್ಲಿ ನಡೆದ ಮಹತ್ವದ ಅಭಿವೃದ್ಧಿಯಿಂದ ಅಕ್ಕಿ, ಗೋಧಿ, ಹಾಲು ಸೇರಿದಂತೆ ಹಲವು ಕೃಷಿ ಉತ್ಪನ್ನಗಳಲ್ಲಿ ಸ್ವಾವಲಂಬನೆ ಸಾಧಿಸಲಾಗಿದೆ. ಇಂದು ಭಾರತವು ಅಗತ್ಯಕ್ಕಿಂತ ಹೆಚ್ಚು ಆಹಾರ ಉತ್ಪಾದಿಸಿ, ಇತರೆ ದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ತಲುಪಿದೆ ಎಂದು ಗೃಹ ಸಚಿವರು ವಿವರಿಸಿದರು.

ಸಿರಿಧಾನ್ಯಗಳ ಉತ್ಪಾದನೆ ಹೆಚ್ಚಿದರೆ ರೈತರ ಆರ್ಥಿಕ ಸ್ಥಿತಿ ಬಲವಾಗುವುದರ ಜೊತೆಗೆ ಜನರ ಆರೋಗ್ಯ ರಕ್ಷಣೆಯಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ಇಂದಿನ ದಿನಗಳಲ್ಲಿ ಸಿರಿಧಾನ್ಯಗಳಿಂದ ವಿವಿಧ ರೀತಿಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande