
ಚಿತ್ರದುರ್ಗ, 07 ಜನವರಿ (ಹಿ.ಸ.) :
ಆ್ಯಂಕರ್ :
ಮಹಾಯೋಗಿ ವೇಮನ ಅವರು ತೆಲುಗಿನಲ್ಲಿ ದಾರ್ಶನಿಕ ಸಾಹಿತ್ಯ ರಚನೆ ಮಾಡಿ, ಮನೆ ಮನಗಳಲ್ಲಿ ಪ್ರಖ್ಯಾತಿ ಹೊಂದಿದ್ದಾರೆ. ವೇಮನ ಕವಿಯ ಪದ್ಯಗಳು ಕನ್ನಡಕ್ಕೆ ತರ್ಜುಮೆ ಹೊಂದಿದ್ದು, ರಾಜ್ಯದ ಸಾಹಿತ್ಯಾಸಕ್ತರು ಸಹ ವೇಮನ ಕವಿಯನ್ನು ಮೆಚ್ಚಿಕೊಂಡಿದ್ದಾರೆ. ವೇಮನರ ತತ್ವಗಳನ್ನು ಸಾದರ ಪಡಿಸುವ ನಿಟ್ಟಿನಲ್ಲಿ, ಜ.19 ರಂದು ಸರಳ ಹಾಗೂ ಅರ್ಥಪೂರ್ಣವಾಗಿ ಮಹಾಯೋಗಿ ವೇಮನ ಜಯಂತಿ ಆಚರಿಸುವುದಾಗಿ ಪ್ರಭಾರ ಉಪವಿಭಾಗಾಧಿಕಾರಿ ಎನ್.ವೆಂಕಟೇಶ್ ನಾಯ್ಕ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ ಜಯಂತಿ ಕಾರ್ಯಕ್ರಮದ ಸ್ಥಳ ನಿಗದಿಪಡಿಸಬೇಕು. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳನ್ನು ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ವೇಮನ ಕವಿಯ ಸಾಹಿತ್ಯದ ಬಗ್ಗೆ ಜ್ಞಾನವುಳ್ಳ ಸಂಪನ್ಮೂಲ ವ್ಯಕ್ತಿಯನ್ನು ಗುರುತಿಸಿ, ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವಂತೆ ಪ್ರಭಾರ ಉಪವಿಭಾಗಾಧಿಕಾರಿ ಎನ್.ವೆಂಕಟೇಶ್ ನಾಯ್ಕ್ ಸೂಚಿಸಿದರು.
ವೇಮನ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ವೇಮನಾನಂದಾ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಸಾಕಷ್ಟು ಜನರು ಪಾಲ್ಗೊಳ್ಳುವುದರಿಂದ ಪತ್ರಿಕಾ ಭವನದ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ರೆಡ್ಡಿ ಸಮುದಾಯ ಮುಖಂಡರು ಸಭೆಯಲ್ಲಿ ಕೋರಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಧಿಕಾರಿ ಶಿವಕುಮಾರ್, ತಹಶೀಲ್ದಾರ್ ಗೋವಿಂದರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್, ರೆಡ್ಡಿ ಸಮುದಾಯ ಮುಖಂಡರಾದ ದೇವರಾಜ ರೆಡ್ಡಿ, ಶಿವಾರೆಡ್ಡಿ, ವಿಜಯಕುಮಾರ್, ವೆಂಕಟೇಶ್ ರೆಡ್ಡಿ, ಬಾಬು ರೆಡ್ಡಿ, ಅಶ್ವಥನಾರಾಯಣ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa