ಮಹಿಳೆ ಮೇಲೆ ಪೊಲೀಸ್ ಹಲ್ಲೆ ಅಕ್ಷಮ್ಯ : ಪ್ರಹ್ಲಾದ ಜೋಶಿ
ನವದೆಹಲಿ, 07 ಜನವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ ನಗರದ ಕೇಶ್ವಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಅಮಾಯಕ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮ
ಮಹಿಳೆ ಮೇಲೆ ಪೊಲೀಸ್ ಹಲ್ಲೆ ಅಕ್ಷಮ್ಯ : ಪ್ರಹ್ಲಾದ ಜೋಶಿ


ನವದೆಹಲಿ, 07 ಜನವರಿ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ ನಗರದ ಕೇಶ್ವಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಅಮಾಯಕ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಹಿಳೆಯರೊಂದಿಗೆ ಪೊಲೀಸರು ಅಸಭ್ಯವಾಗಿ ವರ್ತಿಸಿದ ರೀತಿ ನಾಚಿಕೆಗೇಡಾದದ್ದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ಪೊಲೀಸರು ದರ್ಪ ಪ್ರದರ್ಶಿಸಿರುವುದು, ರಾಜ್ಯದಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತ ಸ್ಥಿತಿಯಲ್ಲಿದ್ದಾರೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಹಾಗೂ ದುರಾಡಳಿತದ ಪ್ರತಿಬಿಂಬ ಎಂದು ಅವರು ಆರೋಪಿಸಿದರು.

ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಮಾಡಿರುವ ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆಯ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದ ಪ್ರಹ್ಲಾದ ಜೋಶಿ, ಇದು ತುಘಲಕ್ ಸಾಮ್ರಾಜ್ಯವನ್ನು ಮರುಸ್ಥಾಪಿಸುವ ಪ್ರಯತ್ನದಂತೆ ಕಾಣುತ್ತದೆ ಎಂದು ಕಿಡಿಕಾರಿದರು. ಗೃಹ ಸಚಿವರು ಕಣ್ಣು ಮುಚ್ಚಿ ಕುಳಿತಿರುವಂತೆ ವರ್ತಿಸುತ್ತಿದ್ದಾರೆ ಮತ್ತು ಮುಖ್ಯಮಂತ್ರಿ–ಉಪಮುಖ್ಯಮಂತ್ರಿಗಳು ಕುರ್ಚಿ ಕಿತ್ತಾಟದಲ್ಲಿ ತೊಡಗಿರುವುದರಿಂದ, ರಾಜ್ಯದ ಜನರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಗೆ ತಲುಪಿದ್ದಾರೆ ಎಂದು ಅವರು ಹೇಳಿದರು.

ಈ ಘಟನೆಯಲ್ಲಿ ತಪ್ಪಿತಸ್ಥರಾದ ಪೊಲೀಸರ ವಿರುದ್ಧ ಹಾಗೂ ಈ ಪಿತೂರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮವನ್ನು ತಕ್ಷಣ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande