
ಧಾರವಾಡ, 07 ಜನವರಿ (ಹಿ.ಸ.) :
ಆ್ಯಂಕರ್ : ಕೇಂದ್ರೀಯ ಸೈನಿಕ ಬೋರ್ಡ್ ವತಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಸೇವೆಯಲ್ಲಿರುವ ಮತ್ತು ಮಾಜಿ ಸೈನಿಕರ ಮಕ್ಕಳು ಹಾಗೂ ಅವಲಂಬಿತರಿಗೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವರ್ಷ ಎಪ್ರಿಲ್ ತಿಂಗಳಲ್ಲಿ ವಿದ್ಯಾರ್ಥಿವೇತನ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಅಂತಾರಾಷ್ಟ್ರೀಯ ಅಥವಾ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ದಾಖಲೆಗಳನ್ನು ಹೊಂದಿರುವ ಮಾಜಿ ಸೈನಿಕರು ತಮ್ಮ ಮಕ್ಕಳು ಅಥವಾ ಅವಲಂಬಿತರ ಪರವಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, ಈ ವಿದ್ಯಾರ್ಥಿವೇತನದ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa