ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿದು ನೀರು ಪೋಲು : ಸರ್ಕಾರದ ನಿರ್ಲಕ್ಷ್ಯವೇ ಕಾರಣ-ಬಿ.ವೈ.ವಿಜಯೇಂದ್ರ
ಬೆಂಗಳೂರು, 07 ಜನವರಿ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಬ್ಯಾರೇಜ್‌ನ 22ನೇ ಗೇಟ್ ಮುರಿದು ಕೃಷ್ಣಾ ನದಿಯ ನೀರು ಅಪಾರ ಪ್ರಮಾಣದಲ್ಲಿ ಪೋಲಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಇ
Byv


ಬೆಂಗಳೂರು, 07 ಜನವರಿ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಬ್ಯಾರೇಜ್‌ನ 22ನೇ ಗೇಟ್ ಮುರಿದು ಕೃಷ್ಣಾ ನದಿಯ ನೀರು ಅಪಾರ ಪ್ರಮಾಣದಲ್ಲಿ ಪೋಲಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಇದು ಆಕಸ್ಮಿಕ ಅನಾಹುತವಲ್ಲ, ಸ್ಪಷ್ಟವಾದ ತಾಂತ್ರಿಕ ವೈಫಲ್ಯ ಮತ್ತು ಸಂಬಂಧಪಟ್ಟ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ. ನಮ್ಮ ಅನ್ನದಾತರು ಹನಿ ನೀರಿಗೂ ಪರದಾಡುತ್ತಿರುವ ಸಂದರ್ಭದಲ್ಲಿ, ಇಲಾಖೆಯ ನಿರ್ವಹಣಾ ಲೋಪದಿಂದ ಬೃಹತ್ ಪ್ರಮಾಣದ ನೀರು ವ್ಯರ್ಥವಾಗುತ್ತಿರುವುದು ಅಕ್ಷಮ್ಯ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದಾರೆ.

ಕೂಡಲೇ ತಜ್ಞರ ತಂಡವನ್ನು ನಿಯೋಜಿಸಿ ಗೇಟ್ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜೊತೆಗೆ ಬ್ಯಾರೇಜ್‌ನ ಉಳಿದ ಎಲ್ಲಾ ಗೇಟ್‌ಗಳ ಸುರಕ್ಷತೆಯನ್ನು ತಕ್ಷಣ ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ನೀರು ಪೋಲಾಗಿರುವ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಅಧಿಕಾರಿಗಳಿಂದ ಕರ್ತವ್ಯಲೋಪ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೆ ರಾಜ್ಯದ ಎಲ್ಲ ಅಣೆಕಟ್ಟುಗಳ ಗೇಟ್‌ಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ, ಇಂತಹ ಅನಾಹುತಗಳು ಮರುಕಳಿಸದಂತೆ ಖಚಿತಪಡಿಸಿಕೊಳ್ಳಬೇಕು ಎಂದು ವಿಜಯೇಂದ್ರ ಹೇಳಿದರು.

ರಾಜ್ಯದ ಕೃಷಿ, ಕುಡಿಯುವ ನೀರು ಹಾಗೂ ಅನ್ನದಾತರ ಬದುಕು ನೀರಿನ ಮೇಲೆಯೇ ಅವಲಂಬಿತವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಈ ಗಂಭೀರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande