
ಬೆಂಗಳೂರು, 07 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರು ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಶೇಷಾದ್ರಿಪುರಂನಲ್ಲಿರುವ ಶಾಸಕರ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಆದೇಶ ಪತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪಕ್ಷದ ಸಂಘಟನೆಗಾಗಿ ನಿಷ್ಠೆಯಿಂದ ದುಡಿದು ಇಂದು ಹೊಸ ಜವಾಬ್ದಾರಿಗಳನ್ನು ಸ್ವೀಕರಿಸಿದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ನಿಮ್ಮ ಪ್ರಮುಖ ಜವಾಬ್ದಾರಿ ಎಂದು ಅವರು ತಿಳಿಸಿದರು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಇಂದಿನಿಂದಲೇ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಿ-ಫಾರ್ ಸಂಸ್ಥೆಯ ವತಿಯಿಂದ ಪಿಂಚಣಿ ಆದೇಶ ಪತ್ರಗಳ ವಿತರಣೆ ಹಾಗೂ 2026ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವೂ ನಡೆಯಿತು.
ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa