ಮಹಾಯೋಗಿ ವೇಮನರ ಜಯಂತಿಯನ್ನು ಆಚರಿಸಲು ಅಪರ ಜಲ್ಲಾಧಿಕಾರಿಗಳ ಕರೆ
ಗದಗ, 08 ಜನವರಿ (ಹಿ.ಸ.) : ಆ್ಯಂಕರ್ : ಮಹಾಯೋಗಿ ವೇಮನರ ಜಯಂತಿಯನ್ನು ಜನೆವರಿ 19 ರಂದು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾಯೋಗಿ ವೇಮನರ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷ
ಫೋಟೋ


ಗದಗ, 08 ಜನವರಿ (ಹಿ.ಸ.) :

ಆ್ಯಂಕರ್ : ಮಹಾಯೋಗಿ ವೇಮನರ ಜಯಂತಿಯನ್ನು ಜನೆವರಿ 19 ರಂದು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾಯೋಗಿ ವೇಮನರ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಾಯೋಗಿ ವೇಮನರ ಜಯಂತಿಯನ್ನು ಜನೆವರಿ 19 ರಂದು ಜಿಲ್ಲಾಡಳಿತ ಹಾಗೂ ಸಮುದಾಯದ ಸಹಯೋಗದೊಂದಿಗೆ ಆಚರಿಸಲಾಗುತ್ತಿದ್ದು ಸಮುದಯದವರು ಹಾಗೂ ಇಲಾಖೆಯವರು ಸಮಾಲೋಚನೆ ನಡೆಸಿದ ನಂತರ ಕಾರ್ಯಕ್ರಮದ ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಪರ ಜಿಲ್ಲಾಧಿಕಾರಿಗಳು ಮಾತನಾಡಿ ತಾಲೂಕು , ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಸಹ ವೇಮನರ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲು ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ. ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ. ವೇಮನರ ಕುರಿತು ಆಳವಾಗಿ ಅಧ್ಯಯನ ಮಾಡಿದವರನ್ನು ಉಪನ್ಯಾಸಕರನ್ನಾಗಿ ಆಹ್ವಾನಿಸಬೇಕು ಎಂದು ನಿರ್ದೇಶನ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯರು, ಗಣ್ಯರು ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande