
ಹುಬ್ಬಳ್ಳಿ, 08 ಜನವರಿ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯೆ ಸುವರ್ಣ ಕಲ್ಲಕುಂಟ್ಲಾ ಸೇರಿದಂತೆ ಒಟ್ಟು 9 ಜನರ ವಿರುದ್ಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿಯ ಚಾಲುಕ್ಯ ನಗರ ಪ್ರದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಗಲಾಟೆ ನಡೆದ ಹಿನ್ನೆಲೆಯಲ್ಲಿ, ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರ ಸಹೋದರ ಮರಿಯಾ ದಾಸ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಸುವರ್ಣ ಕಲ್ಲಕುಂಟ್ಲಾ, ಡೇವಿಡ್ ಸೇರಿದಂತೆ ಇತರರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ, ಗಲಭೆ ಸೇರಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ.
ಪೊಲೀಸರು ಪ್ರಕರಣವನ್ನು ಐಪಿಸಿ ಸೆಕ್ಷನ್‌ಗಳು 109, 115(2), 118(1), 189(2), 191(2), 74, 190 ಮತ್ತು 351 ಅಡಿಯಲ್ಲಿ ದಾಖಲಿಸಿದ್ದಾರೆ. ಈ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ತೀವ್ರ ಹೋರಾಟ ನಡೆಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa