
ಬೆಂಗಳೂರು, 08 ಜನವರಿ (ಹಿ.ಸ.);
ಆ್ಯಂಕರ್:
ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ವಿಕಾಸಸೌಧದಲ್ಲಿ ಬೀಡಿ ಉದ್ಯಮದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ನಿಗದಿಪಡಿಸುವ ಕುರಿತು ಸಭೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶ್ರೀಮತಿ ಸಲ್ಮಾ ಕೆ ಫಾಹಿಂ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜ, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ ರಾದ ಡಾ. ರವಿಕುಮಾರ್, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಶ್ರೀ ಶಾಹಿದ್ ಟೆಕ್ಕಿಲ್, ಬೀಡಿ ಉದ್ಯಮದ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa