
ವಿಜಯಪುರ, 08 ಜನವರಿ (ಹಿ.ಸ.) :
ಆ್ಯಂಕರ್ : ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಇಂದು ವಿಜಯಪುರದ ಭೂತನಾಳ ಹತ್ತಿರ ನಿರ್ಮಾಣಗೊಂಡಿರುವ ಹಾಗೂ ನಾಳೆ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಳ್ಳಲಿರುವ ಸೈಕ್ಲಿಂಗ್ ವೆಲೋಡ್ರೋಮ್ ಭೇಟಿ ನೀಡಿ, ಕೈಗೊಂಡಿರುವ ಅಗತ್ಯ ಸಿದ್ಧತೆಗಳ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ.ಕೆ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸೈಕ್ಲಿಂಗ್ ಕೋಚ್ ಸೇರಿದಂತೆ ಕ್ರೀಡಾಪಟುಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande