ಶೀಘ್ರದಲ್ಲೇ ಪಂಚಾಯತ್ ಚುನಾವಣೆ: ಎಚ್.ಕೆ. ಪಾಟೀಲ
ಬೆಂಗಳೂರು, 08 ಜನವರಿ (ಹಿ.ಸ.); ಆ್ಯಂಕರ್: ರಾಜ್ಯದಲ್ಲಿ ಪಂಚಾಯತ್ ಚುನಾವಣೆಯನ್ನು ಆದಷ್ಟು ಶೀಘ್ರವಾಗಿ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಕೆಲವು ಪಂಚಾಯ
ಶೀಘ್ರದಲ್ಲೇ ಪಂಚಾಯತ್ ಚುನಾವಣೆ: ಎಚ್.ಕೆ. ಪಾಟೀಲ


ಬೆಂಗಳೂರು, 08 ಜನವರಿ (ಹಿ.ಸ.);

ಆ್ಯಂಕರ್:

ರಾಜ್ಯದಲ್ಲಿ ಪಂಚಾಯತ್ ಚುನಾವಣೆಯನ್ನು ಆದಷ್ಟು ಶೀಘ್ರವಾಗಿ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಕೆಲವು ಪಂಚಾಯ್ತಿಗಳು ಈ ಸಂಬಂಧ ಸುಪ್ರೀಂ ಕೋರ್ಟ್ ಮೊರೆ ಹೋಗುವಂತೆ ರಾಜ್ಯ ಸರ್ಕಾರವನ್ನು ಕೋರಿರುವುದಾಗಿ ಹೇಳಿದರು. ಈ ಕುರಿತು ಒಂದೆರಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande